thekarnatakatoday.com
News

ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

“ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಂದು ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟದ ಪ್ರಯೋಗ ಮಾಡಿದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್‌ ಮಾಡಿದ್ದರು. ಈ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು

ಡ್ರೋನ್ ಪ್ರತಾಪ್ ವಿರುದ್ಧ ಬಿಎನ್ಎಸ್ ಸೆಕ್ಷನ್ 288 ಹಾಗೂ ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಡಿಸೆಂಬರ್ 12ರಂದು ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಬಳಿಕ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಡಿಸೆಂಬರ್ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು. ಆದರೆ ಈಗ ಜಾಮೀನು ಮಂಜೂರು ಆಗಿರುವುದರಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ.

Related posts

ಕಳಸ ಬಂಡೂರಿ ಯೋಜನೆ ಶೀಘ್ರವೇ ಅನುಮತಿ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಡಿಕೆ ಶಿವಕುಮಾರ್

The Karnataka Today

ರಾಜ್ಯ ಸರಕಾರಕ್ಕೆ  ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಇದು  ಮಾಮೂಲಿ ಪ್ರಕ್ರಿಯೆ ಎಂದ  :: ಇಂಧನ ಸಚಿವ ಕೆ.ಜೆ.ಜಾರ್ಜ್,

The Karnataka Today

ಸಿಟಿ ರವಿ ಆಕ್ಷೇಪಾರ್ಹಪದ ಬಳಸಿದ್ದಾರೆ ಅನ್ನೋದು ರೆಕಾರ್ಡ್ ಆಗಿಲ್ಲ ಆದರೆ ನಾಲ್ಕು ಜನ ಸಾಕ್ಷಿ ನುಡಿದಿದ್ದಾರೆ :: ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ

The Karnataka Today

Leave a Comment