ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ವಾದ ಮಂಡಿಸುವಂತಿಲ್ಲ ಎಂದು ಅದೇಶಿಸಿದ ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್

2
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಆದೇಶಿಸಿದೆ.


ಡಿ.13ರಂದು ಸೈಯದ್ ಐನೈನ್ ಖಾದ್ರಿ ಎಂದು ಪರಿಚಯಿಸಿಕೊಂಡ ಮಹಿಳಾ ವಕೀಲರೊಬ್ಬರು ಮುಖ ಮುಚ್ಚಿಕೊಂಡು ನ್ಯಾಯಾಲಯದಲ್ಲಿ ವಾದ ಮಂಡಿಸಲು ಹಾಜರಾಗಿದ್ದರು.

ಇದನ್ನು ಗಮನಿಸಿದ ನ್ಯಾಯಾಲಯ, ಬುರ್ಖಾ ಧರಿಸಿ ನ್ಯಾಯಾಲಯದಲ್ಲಿ ಹಾಜರಾಗುವಂತಿಲ್ಲ ಎಂದು ಹೇಳಿತು. ನ್ಯಾಯಮೂರ್ತಿ ಮೋಕ್ಷಾ ಖಜುರಿಯಾ ಕಜ್ಮಿ ಅವರು ಡಿಸೆಂಬರ್ 13 ರ ಆದೇಶದಲ್ಲಿ ಅವಲೋಕನಗಳನ್ನು ಮಾಡುವಾಗ ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅಡಿಯಲ್ಲಿ ನಿಬಂಧನೆಗಳನ್ನು ಉಲ್ಲೇಖಿಸಿದ್ದಾರೆ

.ಈ ಆದೇಶವು ನವೆಂಬರ್ 27 ರಂದು ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರು , ಸೈಯದ್ ಐನೈನ್ ಖಾದ್ರಿ ಎಂಬ ಮಹಿಳೆ ತನ್ನನ್ನು ತಾನು ವಕೀಲೆ ಎಂದು ಗುರುತಿಸಿಕೊಂಡ ಘಟನೆಗೆ ಸಂಬಂಧಿಸಿದೆ.

ಮುಖವನ್ನು ಮುಚ್ಚಿಕೊಂಡು ಕಾಣಿಸಿಕೊಳ್ಳುವುದು ತನ್ನ ಹಕ್ಕು ಎಂದು ಮಹಿಳೆ ಹೇಳಿಕೊಂಡಿದ್ದು, ಮುಸುಕು ತೆಗೆಯುವಂತೆ ನ್ಯಾಯಾಲಯವು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೌಟುಂಬಿಕ ಹಿಂಸಾಚಾರದ ದೂರು ರದ್ದುಗೊಳಿಸುವಂತೆ ಕೋರಿದ ಪ್ರಕರಣದಲ್ಲಿ ತಾನು ಅರ್ಜಿದಾರರನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು.

ಆದರೆ ಬುರ್ಖಾ ತೆಗೆದು ವಾದ ಮಂಡಿಸುವಂತೆ ನ್ಯಾಯಮೂರ್ತಿ ರಾಹುಲ್ ಭಾರತಿ ಸೂಚಿಸಿದಾಗ, ಅದು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳಿ ಬುರ್ಖಾ ತೆಗೆಯಲು ನಿರಾಕರಿಸಿದ್ದರು.

ಹೀಗಾಗಿ ಮಹಿಳಾ ವಕೀಲರ ಗುರುತು ಪರಿಚಯಗಳನ್ನು ಖಾತರಿಪಡಿಸಿಕೊಳ್ಳಲು ಸಾಧ್ಯವಾಗದ್ದರಿಂದ ನ್ಯಾಯಾಲಯ ಆಕೆ ವಾದ ಮಂಡನೆ ಮಾಡದಂತೆ ನಿರ್ಬಂಧಿಸಿತು.

ವ್ಯಕ್ತಿಯಾಗಿ ಮತ್ತು ವೃತ್ತಿಪರವಾಗಿ ಅವರ ನಿಜವಾದ ಗುರುತನ್ನು ದೃಢೀಕರಿಸಲು ಈ ನ್ಯಾಯಾಲಯಕ್ಕೆ ಸಾಧ್ಯವಾಗದಿರುವುದರಿಂದ ತನ್ನನ್ನು ವಕೀಲೆ ಸೈಯದ್ ಐನೈನ್ ಖಾದ್ರಿ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯು ಅರ್ಜಿದಾರರ ವಕೀಲರೆಂದು ಈ ನ್ಯಾಯಾಲಯವು ಪರಿಗಣಿಸುವುದಿಲ್ಲ.” ಎಂದು ನ್ಯಾಯಮೂರ್ತಿ ಭಾರತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ತ

ರುವಾಯ ಪ್ರಕರಣವನ್ನು ಮುಂದೂಡಿದ ನ್ಯಾಯಾಲಯ, ಬುರ್ಖಾ ಧರಿಸಿ ವಾದ ಮಾಡಲು ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ಗೆ ಆದೇಶಿಸಿತು.

ಈ ಬಗ್ಗೆ ಪರಿಶೀಲನೆ ನಡೆಸಿದ ರಿಜಿಸ್ಟ್ರಾರ್ ಜನರಲ್ ಬುರ್ಖಾ ಧರಿಸಿ ವಾದ ಮಾಡಲು ಅವಕಾಶ ನೀಡುವಂಥ ಯಾವುದೇ ನಿಬಂಧನೆ ಇಲ್ಲ ಎಂದು ಡಿಸೆಂಬರ್ 5 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ರಿಜಿಸ್ಟ್ರಾರ್ ವರದಿಯನ್ನು ಪರಿಶೀಲಿಸಿದ ನಂತರ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೂಚಿಸಿದ ನಿಯಮಗಳು ಅಂತಹ ಯಾವುದೇ ಹಕ್ಕನ್ನು ಉಲ್ಲೇಖಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದರೆ, ವಕೀಲರು ಮತ್ತೆ ಹಾಜರಾಗದಿರಲು ನಿರ್ಧರಿಸಿದ್ದರಿಂದ ನ್ಯಾಯಾಲಯವು ವಿಷಯಕ್ಕೆ ಹೋಗಲಿಲ್ಲ. ನಂತರ, ಮತ್ತೊಬ್ಬ ವಕೀಲರು ಅರ್ಜಿದಾರರನ್ನು ಪ್ರತಿನಿಧಿಸಲು ಮುಂದಾದರು, ಡಿಸೆಂಬರ್ 13 ರಂದು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಲಾಯಿತು

Leave a comment

Leave a Reply

Your email address will not be published. Required fields are marked *

Related Articles

900ವರ್ಷ ಪುರಾತನ ಹಿಂದೂ ದೇವಾಲಯಕ್ಕಾಗಿ ಥಾಯ್ಲೆಂಡ್-ಕಾಂಬೋಡಿಯಾ ಸಂಘರ್ಷ

ನವದೆಹಲಿ: ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ತೀವ್ರ ಸೇನಾ ಸಂಘರ್ಷ ಆರಂಭವಾಗಿದ್ದು, ಕಾಂಬೋಡಿಯಾ ಮೇಲೆ ಥಾಯ್ಲೆಂಡ್...

ಬಡ ಜನರಿರುವ ಗ್ರಾಮವನ್ನು ದತ್ತು ಸ್ವೀಕಾರ ಮಾಡಿದ  ಡಾಕ್ಟರ್ ರಾಜನ್ ದೇಶಪಾಂಡೆ ನೇತೃತ್ವದ ಸಂಸ್ಥೆ

“ಅತೀವ್ರ ಬಡತನದಿಂದ ನಲುಗಿರುವ ಧಾರವಾಡ ಜಿಲ್ಲೆಯ ಗ್ರಾಮವೊಂದನ್ನು ಡಾ. ರಾಜನ್ ದೇಶಪಾಂಡೆ ನೇತೃತ್ವದ ವಿಟ್ಟಲ್ ಮಕ್ಕಳ...

ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ...