ಬರಾಕ್ ಒಬಾಮಾ ಭಾಗವಹಿಸಬೇಕಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸ್ಪೋಟ ನಡೆಸಲು ಸಂಚುರೂಪಿಸಿದ್ದ ಭಟ್ಕಳದ ಮೂವರಿಗೆ ಹತ್ತು ವರ್ಷ ಜೈಲು ಶಿಕ್ಷೆ

63

“ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದ

ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಮತ್ತಿತರ ಆರೋಪಿಗಳಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್‌ಗೆ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ10 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ

. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಮೂವರು ಆರೋಪಿಗಳು ಪಾಕಿಸ್ತಾನದ ಸೂಚನೆಗಳನ್ನು ಪಾಲಿಸುತ್ತಿದ್ದರು ಎಂದು ವರದಿಯಾಗಿದೆ.

ನ್ಯಾಯಾಲಯ ಅಫಾಕ್‌ಗೆ 1.55 ಲಕ್ಷ ರೂಪಾಯಿ ಮತ್ತು ಸಬೂರ್ ಮತ್ತು ಹುಸೇನ್‌ಗೆ ತಲಾ 95,000 ರೂಪಾಯಿ ದಂಡ ವಿಧಿಸಿದೆ. ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಈ ಆದೇಶ ನೀಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿಎಂ ಗಂಗಾಧರ, ಸೆಕ್ಷನ್ 428 CrPC ಅಡಿಯಲ್ಲಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಬೇಕು, ತಲೆಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ಧದ ವಿಚಾರಣೆ ಮುಗಿಯುವವರೆಗೂ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಆದೇಶ ನೀಡಿದರು.

ಈ ಸಂಬಂಧ ನಗರದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಎಂಕೆ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...