ಪುಷ್ಪ 2 ಚಿತ್ರ ಪ್ರದರ್ಶನ ನೂಕುನುಗ್ಗಲು ಪ್ರಕರಣ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ  ಚಿತ್ರ ತಂಡ

2

ಡಿಸೆಂಬರ್ 4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್, ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

ಈಮಧ್ಯೆ, ಸರ್ಕಾರ ಮತ್ತು ಚಿತ್ರರಂಗದ ನಡುವೆ ಆರೋಗ್ಯಕರ ಸಂಬಂಧ ಬೆಳೆಸಲು ನಿಯೋಗ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲಿದೆ ಎಂದು ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮದ (ಎಫ್‌ಡಿಸಿ) ಅಧ್ಯಕ್ಷ ಮತ್ತು ನಿರ್ಮಾಪಕ ದಿಲ್ ರಾಜು ಹೇಳಿದ್ದಾರೆ.

ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡು ಬಾಲಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ವೈದ್ಯರೊಂದಿಗೆ ಮಾತನಾಡಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅಲ್ಲು ಅರವಿಂದ್, ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ವೆಂಟಿಲೇಟರ್ ಸಹಾಯವಿಲ್ಲದೆ ಈಗ ಉಸಿರಾಡುತ್ತಿದ್ದಾನೆ. ಬಾಲಕ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ವಿಶ್ವಾಸವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಎಂದು ತಿಳಿಸಿದ್ದಾರೆ.

ಅಲ್ಲು ಅರ್ಜುನ್ (1 ಕೋಟಿ), ಪುಷ್ಪ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (50 ಲಕ್ಷ), ಮತ್ತು ಚಿತ್ರದ ನಿರ್ದೇಶಕ ಸುಕುಮಾರ್ (50 ಲಕ್ಷ) ಸೇರಿ ಒಟ್ಟು 2 ಕೋಟಿ ರೂ. ಆರ್ಥಿಕ ನೆರವನ್ನು ಬಾಲಕನ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲು ಅರವಿಂದ್ ಅವರು ಚೆಕ್‌ಗಳನ್ನು ದಿಲ್ ರಾಜು ಅವರಿಗೆ ಹಸ್ತಾಂತರಿಸಿದ್ದು, ಅವುಗಳನ್ನು ಬಾಲಕನ ಕುಟುಂಬಕ್ಕೆ ತಲುಪಿಸುವಂತೆ ವಿನಂತಿಸಿದ್ದಾರೆ.

ಪೂರ್ವಾನುಮತಿ ಪಡೆಯದೆಯೇ ಸಂತ್ರಸ್ತ ಕುಟುಂಬದೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನಗೊಂಡ ವೇಳೆ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು ಮತ್ತು ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಘಟನೆ ನಂತರ, ಮೃತ ಮಹಿಳೆಯ ಕುಟುಂಬದ ದೂರಿನ ಆಧಾರದ ಮೇಲೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳು ಬಾಲಕನ ಸ್ಥಿತಿ ಸುಧಾರಣೆ, ವೆಂಟಿಲೇಟರ್ ಬೆಂಬಲವಿಲ್ಲ ಡಿಸೆಂಬರ್ 4 ರಂದು ‘ಪುಷ್ಪ-2’ ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಗಾಯಗೊಂಡಿದ್ದ ಎಂಟು ವರ್ಷದ ಬಾಲಕನ ಸ್ಥಿತಿ ಸುಧಾರಿಸುತ್ತಿರುವುದರಿಂದ ಆಮ್ಲಜನಕ ಮತ್ತು ವೆಂಟಿಲೇಟರ್ ಬೆಂಬಲವನ್ನು ತೆಗೆದುಹಾಕಲಾಗಿದೆ.

ಆದರೆ, ಆತನ ಚೇತರಿಕೆ ಸಮಯ ತೆಗೆದುಕೊಳ್ಳುತ್ತದೆ ಎಂದು ಆತನ ತಂದೆ ಭಾಸ್ಕರ್ ತಿಳಿಸಿದ್ದಾರೆ. ‘ಪುಷ್ಪ’ ಚಿತ್ರದ ನಟ ಅಲ್ಲು ಅರ್ಜುನ್ ಅವರಿಂದ 10 ಲಕ್ಷ ರೂ. ಗಳ ಚೆಕ್ ಮತ್ತು ‘ಪುಷ್ಪ’ ಚಿತ್ರ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಮತ್ತು ರಾಜ್ಯ ಛಾಯಾಗ್ರಹಣ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರಿಂದ ಹೆಚ್ಚುವರಿ ಸಹಾಯವನ್ನು ಪಡೆದಿರುವುದಾಗಿ ತಿಳಿಸಿದ್ದಾರೆ.

ದೂರನ್ನು ಹಿಂಪಡೆಯಲು ನೀವು ಏಕೆ ಸಿದ್ಧರಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆಯ ಮರುದಿನ ಅಲ್ಲು ಅರ್ಜುನ್ ಸಿಬ್ಬಂದಿಯಿಂದ ನನಗೆ ಬೆಂಬಲ ಸಿಕ್ಕಿತು ಮತ್ತು ಅವರಿಂದ ನನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ  ಎಸ್ಐಟಿಗೆ ಮತ್ತೊಂದು ದೂರು ದಾಖಲು  15 ವರ್ಷದ ಹಿಂದೆ ಬಾಲಕಿ ನಿಗೂಢ ಸಾವು ಪ್ರಕರಣ

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ...

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...