ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವುದರಲ್ಲಿ ತಪ್ಪೇನಿದೆ:: ಮಾಜಿ ಸಂಸದ ಪ್ರತಾಪ್ ಸಿಂಹ

43
40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ.


ಮೈಸೂರಿನ ಕೆಆರ್ ಎಸ್ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧಿಸುತ್ತೇನೆ. ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ‌. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಹೇಳಿದರು.

ಜಯದೇವ ಆಸ್ಪತ್ರೆ ಕಟ್ಟಡ, ಸೂಪರ್ ಸ್ಪೆಷಲಾಟಿ ಆಸ್ಪತ್ರೆ ಕಟ್ಟಿಸಿದ್ದು ಸಿದ್ದರಾಮಯ್ಯ. ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ. 40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ. ಈ ವಿಚಾರದಲ್ಲಿ ತಕಾರರು ಎತ್ತಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಧಕರು ಬರೀ ಬಿಜೆಪಿಯಲ್ಲಿ ಮಾತ್ರ ಇಲ್ಲ. ಎಲ್ಲಾ ಪಕ್ಷದಲ್ಲೂ ಇದ್ದಾರೆ. ಸಿದ್ದರಾಮಯ್ಯ ಅವರ ಹೆಸರು ಇಡುವ ವಿಚಾರದಲ್ಲಿ ಪಕ್ಷಬೇಧ ಮಾಡಬೇಡಿ. ಸಣ್ಣತನ ತೋರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಮಹಾರಾಜರ ಹೆಸರು ಎಲ್ಲಾ ಕಡೆ ಇಟ್ಟಿದ್ದೇವೆ. ಮಹಾರಾಜರ ನಂತರವೂ ಅನೇಕ ಸಾಧಕರು ಮೈಸೂರಿನಲ್ಲಿ ಬಂದಿದ್ದಾರೆ.

ವಿಶ್ವೇಶ್ವರಯ್ಯ ಅವರಂಥ ಇಂಜಿನಿಯರ್ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ? ಮಿರ್ಜಾ ಇಸ್ಮಾಯಿಲ್ ಇರದಿದ್ದರೆ ಬೆಂಗಳೂರಿಗೆ ವಿದ್ಯುತ್‌ ತೆಗೆದುಕೊಂಡು ಹೋಗಲು ಆಗುತ್ತಿತ್ತಾ ಎಂದು ಪ್ರಶ್ನಿಸಿ ಒಳ್ಳೆ ಒಳ್ಳೆಯ ದಿವಾನರು ಇದ್ದ ಕಾರಣ ಒಳ್ಳೆ ಅಭಿವೃದ್ಧಿ ಆಗಿದೆ.

ಅವರಿಗೆ ಇನ್ನೂ ಗೌರವ ಸಿಗಬೇಕಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಕೆಂಪೇಗೌಡರ ನಂತರ ಬಂದ ಸಾಧಕರಿಗೆ ಎಷ್ಟು ಗೌರವ ಕೊಟ್ಟಿದ್ದೇವೋ ಅದೇ ರೀತಿ ಮೈಸೂರಿನಲ್ಲೂ ಮಹಾರಾಜರ ನಂತರ ಬಂದವರಿಗೆ ಗೌರವ ಕೊಡಬೇಕಿದೆ ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...