ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರಕಾರ

59

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ತಿಳಿದುಬಂದಿದೆ.


ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.

ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.

ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.


Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...