ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯ: ಸಂತಾಪ ಸೂಚಿಸಿದ ಆರ್‌ಎಸ್‌ಎಸ್

3

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶುಕ್ರವಾರ ಸಂತಾಪ ಸೂಚಿಸಿದ್ದು ಭಾರತಕ್ಕೆ ಅವರ ಕೊಡುಗೆಗಳು ಸದಾ ಸ್ಮರಣೀಯ ಎಂದು ಹೇಳಿದ್ದಾರೆ.


ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶುಕ್ರವಾರ ಸಂತಾಪ ಸೂಚಿಸಿದ್ದು, ಭಾರತಕ್ಕೆ ಅವರ ಕೊಡುಗೆಗಳು ಸದಾ ಸ್ಮರಣೀಯ ಎಂದು ಹೇಳಿದ್ದಾರೆ.

‘ಭಾರತದ ಮಾಜಿ ಪ್ರಧಾನಿ ಮತ್ತು ದೇಶದ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ರಾಷ್ಟ್ರವು ಅತ್ಯಂತ ದುಃಖಿತವಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ’ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸಿಂಗ್ ಅವರು ಯಾವುದೇ ದೊಡ್ಡ ಹಿನ್ನೆಲೆಯಿಂದ ಬಂದಿರದಿದ್ದರೂ, ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.

ಹೆಸರಾಂತ ಅರ್ಥಶಾಸ್ತ್ರಜ್ಞ ಡಾ. ಸಿಂಗ್ ಅವರು ಭಾರತಕ್ಕೆ ನೀಡಿರುವ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ.

ಅಗಲಿದ ಆತ್ಮಕ್ಕೆ ‘ಸದ್ಗತಿ’ ನೀಡುವಂತೆ ನಾವು ಸರ್ವಶಕ್ತನನ್ನು ಪ್ರಾರ್ಥಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿದೆ. ಅರ್ಥಶಾಸ್ತ್ರದ ಪ್ರಾಧ್ಯಾಪಕನಿಂದ ಪ್ರಧಾನಿಯ ಹುದ್ದೆ ವರೆಗೆ 2004-2014ರವರೆಗೆ 10 ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ ಮತ್ತು ಅದಕ್ಕೂ ಮೊದಲು ಹಣಕಾಸು ಸಚಿವರಾಗಿ ದೇಶದ ಆರ್ಥಿಕತೆಯನ್ನು ವೃದ್ಧಿಸಲು ಸಹಾಯ ಮಾಡಿದ ಕಾಂಗ್ರೆಸ್ ನಾಯಕ, ಜಾಗತಿಕ ಹಣಕಾಸು ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಹೆಸರಾಗಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...