ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ನೀಡುವ ಬಗ್ಗೆ ಸರಕಾರ ಪರಿಗಣಿಸಲಿದೆ ಸಂತ್ರಸ್ತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ:: ಸಚಿವ ಈಶ್ವರ ಖಂಡ್ರೆ

45

ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತ್ರಸ್ತನ ನಿವಾಸಕ್ಕೆ ಇಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು.ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು, ಖಂಡ್ರೆ ಸಾಂತ್ವನ ಹೇಳಿ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ನ್ಯಾಯದ ಪರವಾಗಿದೆ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ. ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದರು.

ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಅಲ್ಲದೆ, ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ನನಗೆ ದೂರು ನೀಡಿದ ಕುಟುಂಬ ಸದಸ್ಯರೊಂದಿಗೆ ನಾನು ಮಾತನಾಡಿದ್ದೇನೆ. ನಾನು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ.

ಕೆಲವು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತನಿಖೆ ನಡೆಸುತ್ತಿದ್ದಾರೆ ಮತ್ತು ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸುವ ಬಗ್ಗೆಯೂ ಸರ್ಕಾರ ಪರಿಗಣಿಸಲಿದೆ ಎಂದು ಹೇಳಿದರು.

ತಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ದುಃಖದಲ್ಲಿರುವ ಕುಟುಂಬಸ್ಥರಿಗೆ ಧೈರ್ಯ, ಸಾಂತ್ವನ ಹೇಳುವ ಅಗತ್ಯವಿದೆ. ನಾವು ಅವರೊಂದಿಗೆ ಇದ್ದೇವೆ ಎಂದರು.

ಪೊಲೀಸರ ವಿರುದ್ಧ ಆಕ್ರೋಶ ಮೃತ ಗುತ್ತಿಗೆದಾರ ಸಚಿನ್ ಮನೆಗೆ ಈಶ್ವರ ಖಂಡ್ರೆ ಭೇಟಿ ನೀಡಿದಾಗ ಅವರ ಜೊತೆಯಲ್ಲಿದ್ದ ಪೊಲೀಸರ ವಿರುದ್ಧ ಸಚಿನ್ ಅವರ ಸಹೋದರಿಯರು ತೀವ್ರ ಆಕ್ರೋಶ ಹೊರಹಾಕಿದರು.

ಸಚಿನ್‌ ಕಾಣೆಯಾಗಿರುವ ಬಗ್ಗೆ ದೂರು ಕೊಡಲು ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ. ದೂರು ಸ್ವೀಕರಿಸಿದ್ದರೆ, ಈ ಅನಾಹುತವನ್ನು ತಡೆಯಬಹುದಿತ್ತು.

ಸಚಿನ್ ಸಾವಿಗೆ ಪೊಲೀಸರೇ ಕಾರಣ. ಈಗೇಕೆ ಪೊಲೀಸರು ಮನೆಗೆ ಬಂದಿದ್ದಾರೆ. ಅವರನ್ನು ಹೊರಗೆ ಕಳುಹಿಸಿ ಎಂದು ಸಚಿವರ ಸಮ್ಮುಖದಲ್ಲೇ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್‌ಪಿ ಜೆಎಸ್ ನ್ಯಾಮೆಗೌಡ ಸೇರಿದಂತೆ ಇತರ ಪೊಲೀಸರು ಮನೆಯಿಂದ ಹೊರನಡೆದರು.

26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ್ ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೆ ಸಚಿವ ಪ್ರಿಯಾಂಕ್ ಖಗ್ರೆ ಅವರ ಆಪ್ತ ರಾಜು ಕಪನೂರ ಸೇರಿದಂತೆ ಇತರೆ 8 ಮಂದಿ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದರು.

ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಚಿನ್ ಪಾಂಚಾಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗುತ್ತಿಗೆ ಪಡೆದಿದ್ದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...