ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ, ಸಾಂತ್ವನ: ಸಿಬಿಐ ತನಿಖೆಗೆ  ಒತ್ತಾಯ

3

ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ, ಸಾಂತ್ವನ: ಸಿಬಿಐ ತನಿಖೆಗೆ ಕುಟುಂಬಸ್ಥರ ಒತ್ತಾಯ ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಸದಸ್ಯರ ಕಿರುಕುಳ, ಬೆದರಿಕೆಗಳನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ ಸಚಿನ್ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಧ್ಯಮಗಳೊಂದಿಗೆ ತಿಳಿಸಿದರು.

ಆತ್ಮಹತ್ಯೆಗೆ ಶರಣಾಗಿರುವ ಅಮಾಯಕ ಗುತ್ತಿಗೆದಾರ ಸಚಿನ್ ಅವರ ನಿವಾಸಕ್ಕೆ ಭಾನುವಾರ ತೆರಳಿದ ಬಿಜೆಪಿ ನಿಯೋಗ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿತು. ಭಾಲ್ಕಿ ತಾಲೂಕಿನ ಕಟ್ಟಿತೊಗಾಂವ್ ಗ್ರಾಮದಲ್ಲಿರುವ ಸಚಿನ್ ಪಾಂಚಾಳ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಪರಿಷತ್ ನಾಯಕ ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ಶಾಸಕರು ಮತ್ತು ಮುಖಂಡರು ಭೇಟಿ ನೀಡಿ, ಸಚಿನ್ ಆತ್ಮಹತ್ಯೆ ಬಗ್ಗೆ ಮಾಹಿತಿ ಪಡೆದರು

. ಈ ಸಂದರ್ಭದಲ್ಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಪೊಲೀಸರು ಸ್ವಲ್ಪ ಹೆಲ್ಪ್ ಮಾಡಿದ್ರೆ ಸಚಿನ್ ಜೀವ ಉಳಿತಿತ್ತು. ಅವರು ತುಂಬಾ ಕ್ರೂರಿಗಳು. ಆರೋಪಿಗಳ ಪರವಾಗಿ, ಅನ್ಯಾಯದ, ಕೊಲೆಗಡುಕರ ಪರವಾಗಿ ನಿಂತಿದ್ದಾರೆ. ನಮ್ಮ ಅಣ್ಣನ ಬಾಡಿ ಮೇಲೆ ಎರಡು ಮೂರು ಟ್ರೈನ್ ಓಡಾಡಿವೆ.

ನಮಗೆ ಈ ಪೊಲೀಸರ ಮೇಲೆ ನಂಬಿಕೆ, ಭರವಸೆ ಇಲ್ಲ. ಈ ಪೊಲೀಸರು ತನಿಖೆ ಮಾಡುವುದರಿಂದ ನಮ್ಮಣ್ಣನ ಸಾವಿಗೆ ನ್ಯಾಯ ಸಿಗುತ್ತೆ ಅನ್ನುವ ಯಾವ ಭರವಸೆ ಇಲ್ಲ. ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿ ನಿಯೋಗವನ್ನು ಒತ್ತಾಯಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಸದಸ್ಯರ ಕಿರುಕುಳ, ಬೆದರಿಕೆಗಳನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ.

ಅನಾಥ ಪ್ರಜ್ಞೆ ಎದುರಿಸುತ್ತಿರುವ ಮೃತರ ಆಶ್ರಯಿಸಿದ್ದ ಕುಟುಂಬ ಸದಸ್ಯರ ಹಾಗೂ ಬಂಧುಗಳ ಆಕ್ರಂದನದ ಶಾಪ ಕಾಂಗ್ರೆಸ್ ಸರ್ಕಾರವನ್ನು ತಟ್ಟದೇ ಬಿಡದು, ದುಷ್ಕರ್ಮಿಗಳ ಗುಂಪನ್ನು ಪೋಷಿಸುತ್ತಿರುವ ಪ್ರಿಯಾಂಕ್ ಖರ್ಗೆ ಇದರ ಫಲ ಅನುಭವಿಸಲೇಬೇಕು. ಸಚಿನ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ವಿಜಯೇಂದ್ರ, ಹೇಳೋದು ಸಿದ್ದಾಂತ ಮಾಡೋದು ದುರಾಚಾರ ಊರಿಗೆಲ್ಲ ಉಪದೇಶ, ಸಿದ್ಧಾಂತ ಹೇಳುತ್ತಾ ತಾವು ಮಾತ್ರ ನೊಂದವರ ಧ್ವನಿಯಾಗಬಲ್ಲೆವು ಎಂಬ ರೀತಿ ತಮ್ಮನ್ನು ಬಿಂಬಿಸಿಕೊಳ್ಳುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ನೈಜ ಮುಖವಾಡ ಈ ಘಟನೆಯಿಂದ ಕಳಚಿ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದಲ್ಲಿದಾಗ ಇಂಥದ್ದೇ ಪ್ರಕರಣಗಳಲ್ಲಿ ಅಧಿಕಾರದಲ್ಲಿದ್ದವರ ರಾಜೀನಾಮೆಗೆ ಆರ್ಭಟಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮದೇ ಸರ್ಕಾರದ ಅವಧಿಯಲ್ಲಿ ನಡೆದಿರುವ ಘಟನೆಯ ಹಿನ್ನಲೆಯಲ್ಲಿ ಈ ಕೂಡಲೇ ದುಷ್ಟರು, ಪುಂಡರು, ಕಮಿಷನ್ ವಸೂಲಿಗಾರರನ್ನು ಜೊತೆಗಿಟ್ಟುಕೊಂಡು ಒಬ್ಬ ಅಮಾಯಕ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣರಾಗಿರುವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆದುಕೊಂಡು ತನಿಖೆಯು ಪಾರದರ್ಶಕವಾಗಿ ನಡೆಯಲು ಅವಕಾಶ ಮಾಡಿಕೊಡಲಿ ಎಂದು ಒತ್ತಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...