ಎಸ್‌ಡಿಎ ಆತ್ಮಹತ್ಯೆ ಪ್ರಕರಣ.ಹೆಬಾಳ್ಕರ್ ಪಿ ಎ ಸಹಿತ ಮೂವರಿಗೆ ಜಾಮೀನು ಎರಡು ತಿಂಗಳ ನಂತರ ಪ್ರಮುಖ ಆರೋಪಿ ತಶೀಲ್ದಾರ್ ಕರ್ತವ್ಯಕ್ಕೆ ಹಾಜರ್!

59

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್ ಈ ಪ್ರಕರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸಹಿತ ಮೂವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.


ನವೆಂಬರ್ 5ರಂದು ರುದ್ರಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಕಾರಣ ಕುರಿತು ವಾಟ್ಸಾಫ್ ಗ್ರೂಪ್‌ಗೆ ಸಂದೇಶ ಕಳುಹಿಸಿದ್ದರು.

ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ಹೆಸರು ಕೇಳಿ ಬಂದಿತ್ತು.

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಹಶೀಲ್ದಾರ್‌ ಬಸವರಾಜ್ ನಾಗರಾಳ್ 2 ತಿಂಗಳ ಬಳಿತ ಎಂದಿನಂತೆ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ

. ನವೆಂಬರ್ 5ರಂದು ರುದ್ರಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಕಾರಣ ಕುರಿತು ವಾಟ್ಸಾಫ್ ಗ್ರೂಪ್‌ಗೆ ಸಂದೇಶ ಕಳುಹಿಸಿದ್ದರು.

ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ಹೆಸರು ಕೇಳಿ ಬಂದಿತ್ತು. ಹೀಗಾಗಿ ಮೂವರ ವಿರುದ್ಧ ಖಡೆಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ತಹಶಿಲ್ದಾರ್ ಬಸವರಾಜ್ ನಾಗರಾಳ್ ಅವರನ್ನು ಪ್ರಕರಣದ ಎ1 ಆರೋಪಿಯಾಗಿ ಮಾಡಿದ್ದು, ಆರೋಪಿಯು ಪ್ರಕರಣ ಸಂಬಂಧ ಎರಡು ತಿಂಗಳಿಂದ ಕೆಲಸಕ್ಕೆ ಬಂದಿರಲಿಲ್ಲ.

ಇದೀಗ ಹೊಸ ವರ್ಷ ಜನವರಿ 1ರಂದು ಬುಧವಾರ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಮಧ್ಯೆ, ಮೃತ ರುದ್ರಣ್ಣ ಅವರ ಕುಟುಂಬಸ್ಥರು ನ್ಯಾಯಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸಿವೆ.

ಅಪಾರ ಒತ್ತಡ, ಮೇಲಧಿಕಾರಿಗಳ ಕಿರುಕುಳ ಮತ್ತು ವರ್ಗಾವಣೆ ಶಿಕ್ಷೆ ಯಿಂದಾಗಿ ರುದ್ರಣ್ಣ ಆತ್ಮಹತ್ಯೆಗೆ ಶರಣಾಗಿದ್ದರು, ಆದರೆ, ಆತ್ಮಹತ್ಯೆಗೆ ಕಾರಣರಾದ ಮೂವರು ಆರೋಪಿಗಳು ಇದೀಗ ಸ್ವತಂತ್ರವಾಗಿ ಓಡಾಡುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....