ಹೊಸ ವರ್ಷ ದ ಪಾರ್ಟಿ ಪ್ರಿಯಕರನೊಂದಿಗೆ ಜಗಳ ಚೂರಿ ಇರಿದ ಪ್ರೇಯಸಿ,ಪ್ರಿಯಕರನ ಸ್ಥಿತಿ ಗಂಭೀರ

40

ಹೊಸ ವರ್ಷದ ಪಾರ್ಟಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದಿರುವ ಘಟನೆ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ.

ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (24) ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಭವಾನಿ ಎಂಬ ಯುವತಿ ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇಬ್ಬರಲ್ಲಿ ಪ್ರೀತಿ ಪ್ರೇಮ ಶುರುವಾಗಿದೆ. ಆದರೆ, ಕೆಲ ದಿನಗಳಿಂದ ಇಬ್ಬರೂ ಬೇರಾಗಿದ್ದರು. ಯಾವ ಕರೆ ಕೂಡ ಮಾಡಿರಲಿಲ್ಲ.

ಮಂಗಳವಾರ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಖಾಸಗಿ ಹೋಟೆಲ್’ಗೆ ಬಂದಿದ್ದ ಮನುಕುಮಾರ್ ವಿಚಾರ ತಿಳಿದ ಯುವತಿ, ಆತನಿಗೆ ಫೋನ್ ಮಾಡಿದ್ದಾಳೆ.

ಆದರೆ, ಮನುಕುಮಾರ್ ಫೋನ್ ತೆಗೆದಿಲ್ಲ. ಬಳಿಕ ತಡರಾತ್ರಿ ಹೋಟೆಲ್ ಬಳಿ ಬಂದ ಭವಾನಿ ಅಲ್ಲೇ ಬಿದ್ದಿ್ದ ಪಾಸ್ ಹಾಕಿಕೊಂಡು ಗೇಟ್ ಒಳಗೆ ಹೋಗಿದ್ದಾಳೆ.

ಇದೇ ವೇಳೆ ಮನುಕುಮಾರ್ ಕೂಡ ಗೇಟ್ ಬಳಿ ಬಂದಿದ್ದು, ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ. ತಕ್ಷಣ ಜಗಳ ಬಿಡಿಸಲು ಸ್ನೇಹಿತರು ಮುಂದಾಗಿದ್ದರು. ನೋಡನೋಡುತ್ತಿದ್ದಂತೆಯೇ ಯುವತಿ ಮನುಕುಮಾರ್’ಗೆ ಚಾರಿಯಿಂದ ಇರಿದಿದ್ದಾಳೆ.

ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಆತನ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...