ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ  ನಿರ್ಣಯ

55

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.


ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1 ರಿಂದ 26 ಅನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನೂಳಿದ ವಾರ್ಡ್ ನಂ.27 ರಿಂದ 82 ರವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಯನ್ನಾಗಿ ಮುಂದುವರೆಸಲು ಅನುಮತಿ ನೀಡಲಾಗಿದೆ.

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ. 2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನ ಆಗ್ರಹಿಸಿದ್ದರು. ಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು.

ಹೀಗಾಗಿ, ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....