ಡಿಕೆ ಶಿವಕುಮಾರ್ ವಿದೇಶ ಪ್ರವಾಸ ಸತೀಶ್ ಜಾರಕಿಹೊಳಿ ನಿವಾಸದಲ್ಲಿ35 ಶಾಸಕರ ಸಹಿತ  ಔತಣಕೂಟದಲ್ಲಿ ಸಿಎಂ ಭಾಗಿ ಗರಿಗೆದರಿದ ರಾಜಕೀಯ

44

“ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.

ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ಸ್ಪಷ್ಟಪಡಿವೆ.

ಆದರೂ ಡಿ.ಕೆ. ಶಿವಕುಮಾ‌ರ್ ವಿದೇಶ ಪ್ರವಾಸದಲ್ಲಿದ್ದಾಗ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ


Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...