ಚೀನಾದಲ್ಲಿ ಎಚ್ಎಂಪಿ ವಿ ವೈರಸ್ ಭಾರತದಲ್ಲಿ ಆತಂಕ ಬೇಡ  ಕೇಂದ್ರ ಸರಕಾರ

2

ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು

. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಹೆಚ್ಎಂಪಿವಿ ಸೋಂಕು


ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.


ಈ ಕುರಿತು ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದು, ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ.


ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು. ಸಾಮಾನ್ಯವಾಗಿ ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತದೆ.

ಚೀನಾದಲ್ಲಿ ಚಳಿಗಾಲದಲ್ಲಿ ಈ ರೀತಿಯ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಕೆಲ ವೈರಸ್ ಹೆಚ್ಚು ತಲ್ಲಣ ಸೃಷ್ಟಿಸಲಿದೆ. ಕಳೆದ 5 ವರ್ಷದಲ್ಲಿ ಪ್ರತಿ ಚಳಿಗಾಲದಲ್ಲಿ ಚೀನಾದಲ್ಲಿ ಕೆಲ ವೈರಸ್ ಆತಂಕ ಸೃಷ್ಟಿಸಿದೆ. ಆದರೆ, ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ. ಭಾರತದಲ್ಲಿ ಈ ವೈರಸ್ ಪ್ರಕರಣ ಪತ್ತೆಯಾಗಿಲ್ಲ.


ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಹಿಮಾಲಯದಲ್ಲಿ ಜಲವಿದ್ಯುತ್ ಯೋಜನೆ: ಟಿಬೆಟ್‌ನಲ್ಲಿ ಅಣೆಕಟ್ಟು ನಿರ್ಮಿಸಲು ಚೀನಾ ಮುಂದು; ಭಾರತಕ್ಕೆ ಕಳವಳ? (ಜಾಗತಿಕ ಜಗಲಿ) ಚೀನಾದಲ್ಲಿ ಇನ್ ಫ್ಲೂಯೆನ್ಜಾ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.


ಎಂಬ ವರದಿಗಳ ಹಿನ್ನೆಲೆಯಲ್ಲಿ ಭಾರತದಲ್ಲೂ ಇಂತಹ ಶೀತಜ್ವರ ಪ್ರಕರಣಗಳ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಿಗಾ ವಹಿಸಿದ್ದು, ಅಂತರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ. ಜೊತೆಗೆ, ಈ ಕುರಿತ ಮಾಹಿತಿ ನಿಯಮಿತವಾಗಿ ಪರಿಶೀಲಿಸಿ ನವೀಕರಿಸುತ್ತಿದೆ ಎಂದು ತಿಳಿಸಿದರು. 5 ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲೂ ಚೀನಾ ಎಲ್ಲವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು.

ಆದರೆ ಕೋವಿಡ್ ವೈರಸ್ ಜಗತ್ತಿಗೆ ಆವರಿಸಿ ವಿಶ್ವವೇ ಸ್ತಬ್ಧವಾಗಿತ್ತು. ಆಸ್ಪತ್ರೆಗಳು ಭರ್ತಿಯಾಗಿತ್ತು, ಎಲ್ಲಾ ದೇಶಗಳು ಕೋವಿಡ್ ಪರಿಸ್ಥಿತಿ ಎದುರಿಸಲು ಹೆಣಗಾಡಿತ್ತು. ಕೊರೋನಾ ಮೊದಲ ಅಲೆ, ಎರಡನೇ ಅಲೆ, ಮೂರನೇ ಅಲೆ ಹೀಗೆ ಒಂದರ ಹಿಂದೆ ಮತ್ತೊಂದರಂತೆ ವಿಶ್ವವನ್ನೇ ತತ್ತರಿಸುವಂತೆ ಮಾಡಿತ್ತು.

Leave a comment

Leave a Reply

Your email address will not be published. Required fields are marked *

Related Articles

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯೆಮೆನ್ ಗಲ್ಲು ಶಿಕ್ಷೆ ರದ್ದಾಗಿಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ...

ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್?: ಡ್ರೋನ್ ದಾಳಿಯಲ್ಲಿ ಉಲ್ಫಾ-ಐ ಕಮಾಂಡರ್ ನಯನ್ ಮೇಧಿ ಸೇರಿ 19 ಮಂದಿ ಸಾವು

ಮ್ಯಾನ್ಮಾರ್‌ನ ನಿಷೇಧಿತ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ULFA) ತನ್ನ ಪೂರ್ವ ಪ್ರಧಾನ ಕಚೇರಿಯ...

ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಪವಿತ್ರ ಸಿಂಗ್ ಬಟಾಲ ಬಂಧನ

“ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಪರ್ಕ ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಸಂಘಟನೆಯೊಂದಿಗೆ ಸಂಬಂಧ...

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್...