ದೂರು ನೀಡಲು ಬಂದ ಮಹಿಳೆಜೊತೆ ಪೊಲೀಸ್ ಠಾಣೆಯಲ್ಲಿ  ರಾಸಲೀಲೆ  ಅತ್ಯಾಚಾರ ಪ್ರಕರಣ ದಾಖಲು  ಡಿವೈಎಸ್ ಪಿ ರಾಮಚಂದ್ರಪ್ಪ ಬಂಧನ

63

ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ


ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು

. ಇದರ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದರು. ಆರೋಪಿ ಪೊಲೀಸ್ ಅಧಿಕಾರಿಯನ್ನು ಇಂದು ಮಧುಗಿರಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...