ಸಾರ್ವಜನಿಕರ ವಿರೋಧದ ನಡುವೆ ನಿನ್ನೆ ಮಧ್ಯರಾತ್ರಿಯಿಂದಲೇ ಸರಕಾರಿ ಬಸ್ಸುಗಳ ಟಿಕೆಟ್  ದರ ಏರಿಕೆ ಮಾಡಿದ ರಾಜ್ಯ ಸಾರಿಗೆ ಇಲಾಖೆ

49

“ಹೊಸ ವರ್ಷದ  ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಸಾರಿಗೆ ಇಲಾಖೆ ಕೆಎಸ್ಆರ್ ಟಿ ಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆಆರ್ ಟಿ. ಸಿ, ಕೆಕೆಆರ್ ಟಿಸಿ  ಬಸ್ ಗಳ ಟಿಕೆಟ್ ದರ ಪರಿಷ್ಕರಣೆಗೊಳಿಸಿದ್ದು, ಶೇ 15 ರಷ್ಟು ದರ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್ ದರದ ಬಿಸಿ ತಟ್ಟಿದೆ.


ಸಾರಿಗೆ ಇಲಾಖೆ ನೂತನ ದರಪಟ್ಟಿ ಬಿಡುಗಟೆ ಮಾಡಿದೆ. 50 ರಿಂದ 100 ರೂಪಾಯಿಯಷ್ಟು ಟಿಕೆಟ್ ದರ ಹೆಚ್ಚಳವಾಗಿದೆ.‌ ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬಸ್ ದರ ಏರಿಕೆಯ ನಿರ್ಧಾರಕ್ಕೆ ವಿಪಕ್ಷಗಳು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಏರಿಕೆ ಮಾಡಿದೆ. ಶೇ.42ರಷ್ಟು ದರ ಏರಿಕೆ ಪ್ರಸ್ತಾಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಉತ್ತಮ ಬಸ್‌ ಸೇವೆ ನೀಡುವುದು ಸೇರಿ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಳೆದ ಕೆಲ ತಿಂಗಳ ಹಿಂದೆಯೇ ಪ್ರಯಾಣ ದರ ಏರಿಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು.

ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಶೇ.33ರಷ್ಟು ಹಾಗೂ ಬಿಎಂಟಿಸಿ ಪ್ರಯಾಣ ದರ ಶೇ.42ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲು ಕೋರಿದ್ದವು. ಆದರೆ, ಅದರಲ್ಲಿ ಶೇ.15ರಷ್ಟು ಬಸ್‌ ಪ್ರಯಾಣ ದರಕ್ಕೆ ಅನುಮತಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ವೇಗದೂತ ಸಾರಿಗೆಗೆ ರಾಜ್ಯದಲ್ಲಿ ಟಿಕೆಟ್‌ ದರ 7 ರೂ.ಗಳಿಂದ 115 ರೂಪಾಯಿ ವರೆಗೆ ಹೆಚ್ಚಳವಾಗಿದೆ. ಬೀದರ್‌ ನಿಂದ ಬೆಂಗಳೂರಿಗೆ ಬರಬೇಕಾದರೆ 115 ರೂಪಾಯಿ ಹೆಚ್ಚಿಗೆ ನೀಡಬೇಕು. ಕಲಬುರಗಿಯಿಂದ ಬೆಂಗಳೂರಿಗೆ ಬರಬೇಕಾದರೆ 99 ರೂಪಾಯಿ ಹೆಚ್ಚು ನೀಡಬೇಕಿದೆ. ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಅತ್ಯಂತ ಕನಿಷ್ಠ ಕ್ರಮವಾಗಿ 7 ರೂ. ಹಾಗೂ ಹಾಗೂ 9 ರೂ. ಹೆಚ್ಚಿಗೆ ನೀಡಬೇಕಾಗುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...