ಸಿಎಂ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಜಾರಕಿಹೊಳಿ ಮನೆಯಲ್ಲಿ ಔತಣ ಕೂಟ

31

“ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ

ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ.


ಇದು ಸಿದ್ದರಾಮಯ್ಯ ಅವರ ಸ್ಥಾನವನ್ನು ಬಲಪಡಿಸುವ ಪ್ರಯತ್ನವನ್ನು ಸೂಚಿಸುತ್ತದೆ ಎಂದು ಹೇಳಿದರು. ನಾನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಾಗ ವಿಜಯೇಂದ್ರ ಭವಿಷ್ಯ ಹೇಳ್ತಾರಾ ಎಂದು ಸಿದ್ದರಾಮಯ್ಯ ಹೇಳಿದ್ದರು.

ನಾನು ಹೇಳಿದ್ದು ಏನು ಎಂದು ಮುಂದೆ ಗೂತ್ತಾಗುತ್ತದೆ. ಔತಣಕೂಟದಿಂದ ಎಲ್ಲವು ಸರಿ ಇಲ್ಲ ಎಂದು ತಿಳಿದು ಬರುತ್ತದೆ. ಸಿದ್ದುರಾಮಯ್ಯ ಬಜೆಟ್ ನಂತರ ರಾಜೀನಾಮೆ ನೀಡುತ್ತಾರೆ ಎಂಬ ಅಂಶ ಚರ್ಚೆಗೆ ಬಂದಿದೆ.

ಇದರಿಂದ ಔತಣಕೂಟದ ಮೂಲಕ ತಮ್ಮ ರಾಜಕೀಯ ದಾಳ ಬಿಟ್ಟಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡಲು ತಯಾರಿಲ್ಲ. ಆದರೆ, ಸಿದ್ದರಾಮಯ್ಯ ಅವರನ್ನು ಮುಂದುವರೆಸಲು ಅವರ ವಿರೋಧಿ ತಂಡ ಬಿಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದು v/s ಯುದ್ದ ಎಂಬಾಂತೆ ಆಗಿದೆ ಎಂದು ವ್ಯಂಗ್ಯವಾಡಿದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...