ಶಿಕ್ಷಕಿಗೆ ನೋಟ್ ಬುಕ್ ತೋರಿಸುವಾಗ ಹೃದಯಾಘಾತದಿಂದ ಕುಸಿದು ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ

36

ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ಕ್ಲಾಸ್ ವಿದ್ಯಾರ್ಥಿನಿ ಸಾವು ಈ ಹೃದಯಾಘಾತ  ಎಲ್ಲ ವಯೋಮಾನದವರನ್ನೂ ಕಾಡಲು ಶುರು ಮಾಡಿದೆ.

ಅದರಲ್ಲೂ ಈ ಕೊರೋನಾ ಬಂದು ಹೋಗಿದ್ದಾಗಿನಿಂದ ಚಿಕ್ಕವರಿಂದ ದೊಡ್ಡವರು ಏಕಾಏಕಿ ಕುಸಿದುಬಿದ್ದು ಪ್ರಾಣ ಬಿಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಅದರಂತೆ ಮೂರನೇ ತರಗತಿಯಲ್ಲಿ ಓದುತ್ತಿದ್ದ ಮಗುವೊಂದು ಶಾಲೆಯಲ್ಲಿ ಕುಸಿದುಬಿದ್ದು ಹೃದಯಾಘಾತವಾಗಿ ಸಾವನ್ನಪ್ಪಿರುವುದು ವರದಿಯಾಗಿದೆ.

ಚಾಮರಾಜನಗರ, ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಇಂದು ಎಂದಿನಂತೆ ಶಾಲೆಗೆ ಹೋಗಿದ್ದು, ಕ್ಲಾಸ್ನಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಾಗ ಏಕಾಏಕಿ ಕುಸಿದುಬಿದ್ದು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದಳು. ಇಂದು ಎಂದಿನಂತೆ ಶಾಲೆಗೆ ತೆರಳಿದ್ದಾಳೆ. ಆದ್ರೆ, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದಿದ್ದಾಳೆ.

ಆಗ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ತೇಜಸ್ವಿನಿ ಉಸಿರು ನಿಂತಿದೆ. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ

. ಹೃದಯಾಘಾತದ ಪ್ರಕರಣಗಳು ವಯಸ್ಕರಲ್ಲಿ ಕಂಡುಬಂದರೂ, ಈಗ ಮಕ್ಕಳು ಮತ್ತು ಯುವಕರು ಸಹ ಇದಕ್ಕೆ ಗುರಿಯಾಗುತ್ತಿದ್ದಾರೆ. ಇಂತಹದೊಂದು ಪ್ರಕರಣ ಈಗ ಕರ್ನಾಟಕದಲ್ಲಿ ನಡೆದಿದ್ದು,  ಶಾಲೆಗೆ ಹೋಗಿದ್ದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ನೋಡುಗರ ದುಃಖ ಮಡುಗಟ್ಟಿದ್ದು, ಶಾಲೆಯಲ್ಲಿ ಶೋಕ ಆವರಿಸಿದೆ. ಶಾಲೆಯ ಮುಖ್ಯೋಪಾಧ್ಯಾಯ ಹೇಳಿದ್ದೇನು? ಇನ್ನು ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಎಂದಿನಂತೆ ಇಂದು ವಿದ್ಯಾರ್ಥಿನಿ ತೇಜಸ್ವಿನಿ ಬಂದಿದ್ದಾರೆ.

ಎರೆಡು ಪಿರಿಯಡ್ ಆದ ಬಳಿಕ ಶಾರ್ಟ್ ಬ್ರೇಕ್ ಇತ್ತು. ಈ ಸಮಯದಲ್ಲಿ ಕೈಯಲ್ಲಿ ನೋಟ್ ಬುಕ್ ಹಿಡಿದು ತೇಜಸ್ವಿನಿ ಆಚೆ ಬಂದಿದ್ದಾಳೆ

. ಆ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚೆಸ್ಟ್ ಮಸಾಜ್ ಇಸಿಜಿ ಮಾಡಿಸಿದ್ದೇವೆ. ಆದ್ರೆ, ಹೃದಯಾಘಾತದಿಂದ ತೇಜಸ್ವಿನಿ ಸಾವನ್ನಪ್ಪಿರುವುದಾಗಿ ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಪೋಷಕರಿಗೆ ಮಾಹಿತಿ ನೀಡಿದ್ದೇವೆ . ಪೋಷಕರು ಪೋಸ್ಟ್ ಮಾರ್ಟಂಗೆ ಒಪ್ಪಲಿಲ್ಲ. ಸದ್ಯ ಬದನಗುಪ್ಪೆಯ ನಿವಾಸಕ್ಕೆ ಮೃತದೇಹ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದ್ದ ಒಂದೇ ಒಂದು ಮಗುವನ್ನು ಕಳೆದುಕೊಂಡ ದಂಪತಿ ಬಿದ್ದು ಬಿದ್ದು ಅಳುತ್ತಿದ್ದಾರೆ. ಈ ಮನಕಲಕುವ ದೃಶ್ಯ ನೋಡಗರ ಕಣ್ಣಂಚಿನಲ್ಲಿ ನೀರು ತರಿಸಿತು. ಇನ್ನು ಏನು ತಿಳಿಯದ ಕೂಸಿಗೆ ಹೃದಯಾಘಾತವಾಗಿದೆ ಎನ್ನುವುದು ಎಲ್ಲರನ್ನೂ ಬೆಚ್ಚಿಬೀಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...