2026ರ ಮಾರ್ಚ್ ವೇಳೆಗೆ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ; ಗುಡುಗಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ

3

ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ.

ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದ್ದಾರೆ. ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ ಎಂದು ಗುಡುಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ, ಆದರೆ ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನಾವು ಮಾರ್ಚ್ 2026ರ ವೇಳೆಗೆ ಭಾರತದ ನೆಲದಿಂದ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ ಎಂದು ಬರೆದಿದ್ದಾರೆ.

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಕೂಡ ನಕ್ಸಲೀಯರ ಈ ಹೇಡಿತನದ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಹುತಾತ್ಮ ಯೋಧರ ಕುಟುಂಬಗಳಿಗೆ ನನ್ನ ಸಂತಾಪ. ಹುತಾತ್ಮ ಯೋಧರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಮತ್ತು ಮೃತರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಬಸ್ತಾರ್ ನಲ್ಲಿ ನಡೆಯುತ್ತಿರುವ ನಕ್ಸಲ್ ನಿರ್ಮೂಲನಾ ಅಭಿಯಾನದಿಂದ ನಕ್ಸಲೀಯರು ಭಯಗೊಂಡಿದ್ದು, ಹತಾಶೆಯಿಂದ ಇಂತಹ ಹೇಡಿತನದ ಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿಷ್ಣುದೇವ್ ಸಾಯಿ ಹೇಳಿದ್ದಾರೆ. ಸೈನಿಕರ ಬಲಿದಾನ ವ್ಯರ್ಥವಾಗುವುದಿಲ್ಲ,


ನಕ್ಸಲ್ ವಾದವನ್ನು ಕೊನೆಗಾಣಿಸಲು ನಮ್ಮ ಹೋರಾಟ ಬಲವಾಗಿ ಮುಂದುವರಿಯಲಿದೆ ಎಂದರು.

ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಮಧ್ಯಾಹ್ನ 2.15ರ ಸುಮಾರಿಗೆ ನಕ್ಸಲೀಯರು ನೆಲಬಾಂಬ್ ಸ್ಫೋಟಿಸಿ ಸೇನಾ ವಾಹನವನ್ನು ಸ್ಫೋಟಿಸಿದ್ದಾರೆ ಎಂದು ಬಸ್ತಾರ್ ರೇಂಜ್ ಐಜಿ ತಿಳಿಸಿದ್ದಾರೆ

. ದಾಂತೇವಾಡ ಜಿಲ್ಲೆಯ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ತಮ್ಮ ಎಸ್‌ಯುವಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಡಿಆರ್‌ಜಿಯು ರಾಜ್ಯ ಪೋಲೀಸ್‌ನ ಒಂದು ಘಟಕವಾಗಿದ್ದು, ಸ್ಥಳೀಯ ಆದಿವಾಸಿಗಳು ಮತ್ತು ಶರಣಾದ ನಕ್ಸಲೀಯರಿಂದ ಹೆಚ್ಚಾಗಿ ನೇಮಕಗೊಳ್ಳುತ್ತಾರೆ.

Leave a comment

Leave a Reply

Your email address will not be published. Required fields are marked *

Related Articles

ಇಸ್ಲಾಂಗೆ ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ ಭಾಗ್ಯಶ್ರೀ ಹತ್ಯೆ ಮಾಡಿದ ಶೇಖ್ ರಯೀಸ್

ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...