ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ 8 ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ದಾಳಿ

71

“ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ,

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ-ಬೆಟಗೇರಿ ನಗರಸಭೆ ಎಇಇ ಆರ್ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.


ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...