ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ::.ಡಿ.ಕೆ ಶಿವಕುಮಾರ್

56
‘ಯಾವ ಪವರ್ ಇಲ್ಲ, ಶೇರಿಂಗ್ ಇಲ್ಲ- 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ:


ಯಾವುದೇ ಸ್ವಾಮೀಜಿಗಳು ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ’ ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆಎಂದರು. ಡಿ.ಕೆ ಶಿವಕುಮಾರ್

ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ

. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, “ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ” ಎಂದರು.

ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂದು ಕೇಳಿದಾಗ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ.

ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ನಾನು, ಸಿಎಂ ಸಭೆ ಕರೆದಿದ್ದೇವೆ. ಎಲ್ಲಾ ಸಭೆ ರದ್ದು ಮಾಡಿ ಸಂಜೆ ಪದಾಧಿಕಾರಿಗಳ ಇತರೆ ಸಭೆ ಇದೆ. ಸುರ್ಜೇವಾಲ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಎಂಎಲ್‌ಎ, ಮಂತ್ರಿಗಳಿಗೆ ಜವಾಬ್ದಾರಿ ಕೊಡಬೇಕಿದೆ.

ನಾಳೆ ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ. ದೆಹಲಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದರು. ಪ್ರತಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಈ ವಿಚಾರ ಗೊತ್ತಿಲ್ಲ.

ಅವರು ತಮ್ಮ ಅನುಭವದ ಮೇಲೆ ಮಾತನಾಡುತ್ತಿರಬೇಕು” ಎಂದು ತಿಳಿಸಿದರು. ಶತ್ರುಗಳ ನಾಶಕ್ಕೆ ಪೂಜೆ ಮಾಡಿಸಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಅನುಭವವಲ್ಲವೇ.

ಅವರು ಕದ್ದು ಮುಚ್ಚಿ ಹೋಮ ಮಾಡುತ್ತಾರೆ. ನಾನು ಬಹಿರಂಗವಾಗಿ ಮಾಡುತ್ತೇನೆ. ದಿನ ಬೆಳಗಾದರೆ ನಾನು ದೇವರಿಗೆ ಪೂಜೆ ಮಾಡುತ್ತೇನೆ” ಎಂದರು. “

ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು


. “ಈಗಾಗಲೇ 72 ಕಡೆ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅರ್ಜಿ ಬಂದಿವೆ. ಉಳಿದ ಕಡೆಗಳು ಸೇರಿ 100 ಕಚೇರಿ ನಿರ್ಮಾಣ ಮಾಡಲಾಗುವುದು.

ಸಚಿವರು ಪಕ್ಷದ ಹಿರಿಯ ನಾಯಕರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗೂ ಬೇರೆ ಬೇರೆ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...