ಎಟಿಎಮ್ ಗೆ ಹಣ ಹಾಕಲು ಬಂದಿದ್ದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಓರ್ವ ಸಿಬ್ಬಂದಿ ಸ್ಥಳದಲ್ಲಿ ಮೃತ್ಯು ಹಣದೊಂದಿಗೆ ಪರಾರಿಯಾದ   ದರೋಡೆಕೋರರು

37

“ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.  ಎಸ್ ಬಿ ಐ  ಬ್ಯಾಂಕ್ ಸಿಬ್ಬಂದಿ ಜಿಎಸ್’ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು.


ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...