ಸೈಫ್ ಅಲಿ ಖಾನ್ ಚೂರಿ ಇರಿತ ಆರೋಪಿಯನ್ನು ಬಂಧಿಸಿದ ಮುಂಬಯಿ ಪೊಲೀಸ್

54


ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಬಾಂದ್ರಾ ಪೊಲೀಸ್ ಠಾಣೆಗೆ ಶಂಕಿತ ವ್ಯಕ್ತಿಯನ್ನು ಪೊಲೀಸರು ಕರೆತರುತ್ತಿರುವುದು ಕಂಡು ಬಂದಿದ್ದು, ನಟನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ವ್ಯಕ್ತಿ ಈತನೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಈ ವ್ಯಕ್ತಿಯನ್ನು ಪೊಲೀಸರಪು ಬಾಂದ್ಲಾ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು, ಘಟನೆ ಬಳಿಕ ತನ್ನ ಗುರುತು . ಸಿಗಬಾರದು ಎಂದು ಎಂದು ಬಟ್ಟೆಯನ್ನು ಬದಲಿಸಿದ್ದ ಎಂದು ತಿಳಿದುಬಂದಿದೆ.

, ಮನೆಗೆಲಸದವರ ಬಳಿ 1 ಕೋಟಿ ರೂ. ಡಿಮ್ಯಾಂಡ್ ಮಾಡಿದ್ದ ಆರೋಪಿ..! ಆರೋಪಿ ಪತ್ತೆಗೆ ಪೊಲೀಸರು 20 ತಂಡಗಳನ್ನು ರಚಿಸಿದ್ದು, ತಾಂತ್ರಿಕ ಮಾಹಿತಿಗಳನ್ನು ಬಳಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೈಫ್ ಅಲಿ ಖಾನ್ ಜೊತೆ ಹೊಡೆದಾಡುವಾಗ ಅವರಿಗೆ ಗಾಯವಾಗುವಂತೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸ್ ತಂಡಗಳು ವಸಾಯಿ ಹಾಗೂ ನಲಸೋಪಾರದ ಬಳಿಯೂ ಬೀಡು ಬಿಟ್ಟಿದ್ದವು.

ಆರೋಪಿಯು ದರೋಡೆ ನಡೆಸಲು ಸೈಫ್ ಅಲಿ ಖಾನ್ ರ ಐಷಾರಾಮಿ ಬಂಗಲೆಯನ್ನು ಪ್ರವೇಶಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್ಮೆಂಟ್ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ, ಅಲ್ಲಿದ್ದ ಮನೆಗೆಲಸದವರ ಬಳಿಕ 1 ಕೋಟಿ ರೂ. ಹಣ ನೀಡದಿದ್ದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ.

ಈವೇಳೆ ಕೂಗಾಟ ಕೇಳಿ ಕೊಠಡಿ ಬಳಿ ಬಂದ ಸೈಫ್ ಅವರು ಮಗನ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಆರೋಪಿ ಸೈಫ್ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದ.

ಘಟನೆಯಲ್ಲಿ ಸೈಫ್ ಅಲಿ ಖಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬೆನ್ನಲ್ಲೇ ಆರೋಪಿ ಪತ್ತೆಗೆ ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆಗಿಳಿದಿದ್ದರು. ಆರೋಪಿಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಫೋಟೋವನ್ನು ಬಿಡುಗಡೆ ಮಾಡಿದ್ದರು.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ವ್ಯಕ್ತಿಯೊಬ್ಬ ಬೆನ್ನ ಹಿಂದೆ ಬ್ಯಾಗ್‌ ಹಾಕಿಕೊಂಡು ಮೆಟ್ಟಿಲುಗಳ ಕೆಳಗೆ ಇಳಿಯುವುದು ಸೆರೆಯಾಗಿತ್ತು.

ಫೈರ್‌ ಎಕ್ಸಿಟ್‌ ದಾರಿಯಲ್ಲಿ ಆರೋಪಿ ಕೆಳಗೆ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು. ಸದ್ಯ ಖಾಕಿ ವಶದಲ್ಲಿರುವ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಕೃತ್ಯದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...