thekarnatakatoday.com
National

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ ತ್ವರಿತ ವಿಚಾರಣೆ ಆರೋಪಿ ಸಂಜಯ್ ರಾಯ್ ತಪ್ಪಿದಸ್ಥ ಕೋರ್ಟ್ ತೀರ್ಪು ಜನವರಿ 20ಶಿಕ್ಷೆ ಪ್ರಮಾಣ ಪ್ರಕಟ

“ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, ಕೇವಲ 57 ದಿನಗಳಲ್ಲೇ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರೋಪಿ 33 ವರ್ಷದ ಸಂಜಯ್ ರಾಯ್ ದೋಷಿ ಎಂದು ಹೇಳಿದ್ದಾರೆ. ಆದರೆ ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸುವುದಾಗಿ ತಿಳಿಸಿದೆ.

ಆಸ್ಪತ್ರೆಯಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ರಾಯ್ ನನ್ನು ಕೊಲೆಯ ಮರುದಿನ ಬಂಧಿಸಲಾಯಿತು ಮತ್ತು ಅಂದಿನಿಂದ ಜೈಲಿನಲ್ಲಿ ಇರಿಸಲಾಗಿದೆ. ತಪ್ಪಿತಸ್ಥ ರಾಯ್ ಗೆ ಮರಣದಂಡನೆ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ನ್ಯಾಯಾಲಯವು ನವೆಂಬರ್ 11 ರಂದು ಪ್ರಕರಣದ ವಿಚಾರಣೆ ಆರಂಭಿಸಿದ್ದು, ಸುಮಾರು 50 ಸಾಕ್ಷಿಗಳಿಂದ ಸಾಕ್ಷ್ಯವನ್ನು ಆಲಿಸಿದೆ ಮತ್ತು ಕಳೆದ ಡಿಸೆಂಬರ್ 21 ರಂದು ರಾಯ್ ನಿಲುವನ್ನು ಪಡೆದುಕೊಳ್ಳಲಾಗಿತ್ತು.

Related posts

ಬೆಟ್ಟಿಂಗ್ ಆ್ಯಪ್  ಪರ ಪ್ರಚಾರ ಟಾಲಿವುಡ್ ನಟ ಪ್ರಕಾಶ್ ರಾಜ್ ಸಹಿತ 25 ನಟ ನಟಿಯರ ವಿರುದ್ಧ ಪ್ರಕರಣ ದಾಖಲು

The Karnataka Today

ಗಣರಾಜ್ಯೋತ್ಸವ ಸಚಿವ ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣಕ್ಕೆ ಚಾಲನೆ ಕೆಳಕ್ಕೆ ಬಿದ್ದ  ಬೃಹತ್ ತ್ರಿವರ್ಣ ಧ್ವಜ 

The Karnataka Today

ಮಹಾರಾಷ್ಟ್ರ ಶಿವಸೇನೆ ಉದ್ಭವ ಠಾಕ್ರೆ ಬಣದ ಐದು ಜನ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

The Karnataka Today

Leave a Comment