ಡೊನಾಲ್ಡ್ ಟ್ರಂಪ್ ಅಮೆರಿಕಾದ 47ನೇ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ , ವಿದೇಶಾಂಗ ಸಚಿವ ಎಸ್ ಜೈಶಂಕರ್ ಉದ್ಯಮಿ ಮುಕೇಶ್ ಅಂಬಾನಿ ದಂಪತಿಗಳು

60

ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಜನವರಿ 20ರಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಮೆರಿಕಾದ ಅಧ್ಯಕ್ಷರ ಭವನವಾದ ಕ್ಯಾಪಿಟಲ್ ಹೌಸ್‌ನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಕ್ಷಣಗಣನೆ ಪ್ರಾರಂಭ ಆಗಿದೆ.

ಈ ಕಾರ್ಯಕ್ರಮದಲ್ಲಿ ಅರ್ಜೆಂಟೈನಾ, ಇಟಲಿ, ಎಲ್ ಸಾಲ್ವಡಾರ್, ಹಂಗೇರಿ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಇದೆ.

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಉದ್ಯಮಿ ಮುಕೇಶ್ ಅಂಬಾನಿ ದಂಪತಿ ಸೇರಿದಂತೆ ಕೆಲವು ಗಣ್ಯರು ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದು

, ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಈಗಾಗಲೇ ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಜೊತೆಗೆ ತೆಗೆಸಿಕೊಂಡ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಸೋಲನುಭವಿದಾಗ ಬೆಂಬಲಿಗರು ದಾಳಿ ಮಾಡಿದ್ದ ಸ್ಥಳದಲ್ಲಿಯೇ ಇಂದು ಪ್ರಮಾಣವಚನ ನಡೆಯುತ್ತಿರುವುದು ಗಮನಾರ್ಹವಾಗಿದೆ.

ಅಮರಿಕ ಚುನಾವಣಾ ಇತಿಹಾಸದಲ್ಲಿ ಈಗಾಗಲೇ ಡೊನಾಲ್ಡ್ ಟ್ರಂಪ್‌ ಒಬ್ಬರು ಒಂದು ಬಾರಿ ಗೆದ್ದು, ಬಳಿಕ ಸೋತು ಮತ್ತೆ ಈಗ ಪುನಃ ಗೆದ್ದ ಇತಿಹಾಸ ಸೃಷ್ಟಿಸಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮವು ಯಾವಾಗಲೂ ಅಧ್ಯಕ್ಷಿಯ ಭವನದ ಹೊರಗಡೆಯೇ ನಡೆಯುತ್ತಿತ್ತು. ಆದರೆ ಈ ಭಾರೀ ಭೀಕರ ಚಳಿ ಹಿನ್ನಲೆ ಅಧ್ಯಕ್ಷೀಯ ಭವನದ ಹೊಳಗಡೆ ನಡೆಯಲಿದೆ.

ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಡಿ ವ್ಯಾನ್ಸ್ ಅವರು ಮೊದಲು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬಳಿಕ ಡೊನಾಲ್ಡ್ ಟ್ರಂಪ್ ಅವರು ತಮ್ಮ ಉದ್ಘಾಟನಾ ಭಾಷಣವನ್ನು ಮಾಡುತ್ತಾರೆ,

ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಟ್ರಂಪ್-ವಾನ್ಸ್ ಉದ್ಘಾಟನಾ ಸಮಿತಿಯ ಆಹ್ವಾನದ ಮೇರೆಗೆ,

ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಯುನೈಟೆಡ್ ಸ್ಟೇಟ್‌ನ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಜೆ.ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...