ಯುವತಿ ಮೇಲೆ ಕಳೆದ ಐದು ವರ್ಷಗಳಿಂದ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ 59 ಆರೋಪಿಗಳಲ್ಲಿ 57 ಮಂದಿಯನ್ನು ಬಂಧಿಸಿದ ಪೊಲೀಸರು

3
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 59 ಆರೋಪಿಗಳ ಪೈಕಿ 57 ಮಂದಿ ಬಂಧನ!

ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.


ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ ಜಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಸಮೀಪದಲ್ಲಿಯೇ ಬಂಧಿಸಲಾಗಿದೆ.

ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.

ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ.

ತನಿಖೆ ಪೂರ್ಣಗೊಳಿಸಿ ಆದಷ್ಟು ಬೇಗ ದೋಷಾರೋಪ ಪಟ್ಟಿ ಸಲ್ಲಿಸುವುದು ಪೊಲೀಸ್ ತಂಡದ ಉದ್ದೇಶವಾಗಿದೆ’ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವು ಆರೋಪಿಗಳು ಬಾಲಕಿಯನ್ನು ಭೇಟಿಯಾಗಿದ್ದು, ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯವೆಸಗಿರುವುದು ಇವರೆಗಿನ ತನಿಖೆಯಿಂದ ತಿಳಿದುಬಂದಿದೆ.

ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾನ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.

  2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ಈಗ 18 ವರ್ಷ ತುಂಬಿರುವ ಯುವತಿ 13 ವರ್ಷದಿಂದ 62 ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಗಳ ಬಗ್ಗೆ ಸಂಸ್ಥೆಯು ಸಮಿತಿಗೆ ತಿಳಿಸಿದೆ. ನಂತರ ಸಮಿತಿಯು ಪೊಲೀಸರಿಗೆ ಸೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಇಸ್ಲಾಂಗೆ ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ ಭಾಗ್ಯಶ್ರೀ ಹತ್ಯೆ ಮಾಡಿದ ಶೇಖ್ ರಯೀಸ್

ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...