ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ

62

“ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು.

25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ‌. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅನಾರೋಗ್ಯದಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಇತ್ತ ಸುವರ್ಣಸೌಧದ ಮುಂಭಾಗದಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಬಳಿಕ ಮಾತನಾಡಿದ ಖರ್ಗೆ, ನನ್ನ ಜೀವನವೇ ನನ್ನ ಸಂದೇಶ ಎಂದು ಸಾರುವ ಗಾಂಧೀಜಿ ಮೂರ್ತಿ ಇಡೀ ದೇಶಕ್ಕೆ ಗೌರವ. ಇಡೀ ಜಗತ್ತು ಗಾಂಧೀಜಿ ಅವರನ್ನು ಗೌರವಿಸುತ್ತದೆ. ಬೆಳಗಾವಿ ಇಡೀ ದೇಶಕ್ಕೆ ಗೌರವ ತಂದುಕೊಡುವ ಸ್ಥಳ.

ಯಾಕೆಂದರೆ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಅಂತಹ ಮಹಾತ್ಮನ ಪುತ್ಥಳಿ ಉದ್ಘಾಟನೆ ನನ್ನ ಕೈಯಿಂದ ಆಗಿದ್ದಕ್ಕೆ ನನ್ನ ಜೀವನ ಧನ್ಯವಾಯಿತು .

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...