ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮೊಬೈಲ್ ಹಾಗೂ ಚಿನ್ನಾಭರಣ ಲೂಟಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

34

“ನಗರದ ಜನನಿಬಿಡ ಕೆಆರ್ ಮಾರುಕಟ್ಟೆ ಬಳಿಯೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಈ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


. ತಮಿಳುನಾಡು ಮೂಲದ ಮಹಿಳೆಯೊಬ್ಬರ ಮೇಲೆ ಕೆಆರ್ ಮಾರುಕಟ್ಟೆ ಗೋಡೌನ್ ಸ್ಟ್ರೀಟ್‌ನಲ್ಲಿ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ.

ಬಳಿಕ ಮಹಿಳೆಯ ಬಳಿಯಿದ್ದ ಚಿನ್ನದ ಆಭರಣಗಳು ಮತ್ತು ಮೊಬೈಲ್ ಕಸಿದುಕೊಂಡಿದ್ದಾರೆ. ಪತಿಯೊಂದಿಗೆ ಜಗಳವಾಡಿದ್ದ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಕೆಆರ್ ಮಾಕುಕಟ್ಟೆಯಲ್ಲಿ ಯಲಹಂಕಕ್ಕೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಇಬ್ಬರು ಆರೋಪಿಗಳು ಬಂದಿದ್ದಾರೆ.

ಬಸ್ ಎಲ್ಲಿ ಸಿಗುತ್ತದೆ ಎಂದು ವಿಚಾರಿಸುತ್ತಿದ್ದ ಮಹಿಳೆಯನ್ನು ಆರೋಪಿಗಳು ತೋರಿಸುತ್ತೇವೆ ಎಂದು ಹೇಳಿ ಸಮೀಪದಲ್ಲೇ ಇದ್ದ ಗೋಡೌನ್ ಸ್ಟ್ರೀಟ್‌ಗೆ ಕರೆದೊಯ್ದಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕೆಲವು ಕಡೆಗಳಲ್ಲಿ ಆರೋಪಿಗಳು ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳ ಬಂಧನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶರವಣ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...