ಗರ್ಭಿಣಿ ಹಸುವಿನ ತಲೆ ಕಡಿದು  ಮಾಂಸ ಕದ್ದೊಯ್ದಿದ್ದ ಐವರು ಆರೋಪಿಗಳ ಬಂಧನ

32

ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ.

ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು.

ಇನ್ನು ಕಾರವಾರ ಘಟನೆ ನಂತರ ತನಿಖೆ ಕೈಗೊಂಡಿದ್ದ ಎಸ್ಪಿ ಎಂ.ನಾರಾಯಣ ನೇತೃತ್ವದ ತಂಡ ಇದುವರೆಗೆ ಐವರು ಗೋಹಂತಕರನ್ನು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ.

ಹೀಗಾಗಿ ಹುಡುಕಾಟ ನಡೆಸಿದ್ದಾಗ ಗೋವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ದುರುಳರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದು ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...