ಬಿಜೆಪಿ ಬಣ ರಾಜಕೀಯ ರೆಡ್ಡಿ -ಶ್ರೀ ರಾಮುಲು ಕಿತ್ತಾಟ ಶ್ರೀ ರಾಮುಲುಗೆ ಕರೆ ಮಾಡಿ ಮನವೊಲಿಕೆಗೆ ಯತ್ನಿಸಿದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

60

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ.

ಹಿಂದೆ ಕುಚಿಕು ಗೆಳೆಯರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು ಅವರ ನಡುವೆ ವಾಕ್ಸಮರ ಹೆಚ್ಚುತ್ತಿದ್ದಂತೆ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.

ಬಳ್ಳಾರಿಯಲ್ಲಿರುವ ಶ್ರೀರಾಮುಲು ಅವರಿಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಫೋನ್ ಮಾಡಿ, ಮನವೊಲಿಕೆಗೆ ಯತ್ನಿಸಿದರು.

ಈ ವೇಳೆ ರಾಮುಲು ಇತ್ತೀಚಿಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತಮಗಾದ ಅವಮಾನವನ್ನು ವಿವರಿಸಿದರು. ದೆಹಲಿಗೆ ಬನ್ನಿ ಮಾತನಾಡೋಣ.

ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಜೆಪಿ ನಡ್ಡಾ ಅವರು ಶ್ರೀರಾಮುಲು ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕು ಮುನ್ನ ಬಳ್ಳಾರಿಯ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮುಲು, ಸದ್ಯಕ್ಕೆ ನನಗೆ ಪಕ್ಷ ಬಿಡುವ ಯಾವುದೇ ಆಲೋಚನೆ ಇಲ್ಲ.

ಬಿಜೆಪಿ ನನಗೆ ತಾಯಿ ಇದ್ದಂತೆ. ದಶಕಗಳವರೆಗೆ ನನಗೆ ಎಲ್ಲವನ್ನು ಕೊಟ್ಟು ಬೆಳೆಸಿದೆ. ಅಷ್ಟು ಬೇಗನೆ ನಾನು ತಾಯಿ – ಮಗನ ಸಂಬಂಧವನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದರು

. ಇದೇ ವೇಳೆ ಬಿ. ಶ್ರೀರಾಮುಲು ಅವರನ್ನು ಬೆಳೆಸಿದ್ದೇ ನಾನು ಎಂಬ ರೆಡ್ಡಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ.

ನನ್ನ ಬೆನ್ನಿಗೆ ಕಾರ್ಯಕರ್ತರ ಪಡೆ ಇದೆ. ಗಾಲಿ ಜನಾರ್ದನ ರೆಡ್ಡಿ ಸುಳ್ಳಿನ ಮೇಲೆ ಕೋಟೆ ಕಟ್ಟಲು ಹೊರಟಿದ್ದಾರೆ. ಇದನ್ನು ನಂಬುವಷ್ಟು ಜನರು ಮೂರ್ಖರಲ್ಲ. ಬಳ್ಳಾರಿಗೆ ಎಲ್ಲವೂ ಗೊತ್ತಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದರು.

ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...