26/11 ಮುಂಬೈ ದಾಳಿ ಸೂತ್ರದಾರ ಉಗ್ರ ತಹವ್ವೂರ್ ರಾಣಾ  ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

67

“26/11ರ ಮುಂಬೈ ದಾಳಿಯ ಅಪರಾಧಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಪ್ರಕರಣದಲ್ಲಿ ರಾಣಾ ಮೇಲೆ ದೋಷಾರೋಪಣೆ ವಿರುದ್ಧದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹವ್ವೂರ್ ರಾಣಾಗೆ ಸೋಲು ಉಂಟಾಗಿತ್ತು.

ಕಳೆದ ವರ್ಷ ನವೆಂಬರ್ 13 ರಂದು, ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ಸರ್ಟಿಯೊರಾರಿ ರಿಟ್ ಅರ್ಜಿ ಸಲ್ಲಿಸಿದ್ದನು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಜನವರಿ 21 ರಂದು ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿತು.

ರಾಣಾ, ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿ ಬಂಧಿತನಾಗಿದ್ದಾನೆ. ಕಳೆದ ತಿಂಗಳು ಕ್ಯಾಲಿಫೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್ 26/11 ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು.

Leave a comment

Leave a Reply

Your email address will not be published. Required fields are marked *

Related Articles

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...