ಗರ್ಭಿಣಿ ಹಸುವಿನ ತಲೆ ಕಡಿದ ಆರೋಪಿ ಫೈಝಲ್ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿದ ಪೊಲೀಸರು

50

ಗರ್ಭಿಣಿ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ ಕೊಂಡಕುಳಿ ಗ್ರಾಮದಲ್ಲಿ ಅತ್ಯಂತ ಭೀಕರವಾಗಿ ಗೋಹತ್ಯೆ ಮಾಡಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಸದ್ಯ ಆರೋಪಿಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ

. ನಿನ್ನೆಯಷ್ಟೇ ಪೊಲೀಸರು ಹೊನ್ನಾವರ ವಲ್ಕಿಯ 41 ವರ್ಷದ ತೌಫೀಕ್‌ನನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಪೊಲೀಸರು ಆರೋಪಿಗಳಾದ ಹೊನ್ನಾವರದ ಅಲ್ತಾಫ್ ಕಟಪುರುಸು, ಮಥಿನ್ ಕಟಪುರುಸು ಮತ್ತು ಮೊಹಮ್ಮದ್ ಹುಸೇನ್ ಖುರ್ವೆ ಎಂಬುವರನ್ನು ಬಂಧಿಸಿದ್ದರು.
  ಹೊನ್ನಾವರ ತಾಲೂಕಿನ ಸಾಲಕೋಡಿನ ಕೊಂಡಾಕುಳಿಯಲ್ಲಿ ಬೆಟ್ಟಕ್ಕೆ ಮೇಯಲು ಜನವರಿ 18ರಂದು ಹೋಗಿದ್ದ ಗರ್ಭಿಣಿ ಹಸುವಿನ ಕಾಲು, ರುಂಡ ಕಡಿದು, ಗರ್ಭದಲ್ಲಿ ಬೆಳೆಯುತ್ತಿದ್ದ ಕರುವಿನ ಭ್ರೂಣ ಹೊರತೆಗೆದು ಹತ್ಯೆ ಮಾಡಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...