ವಿಧಾನಸೌಧ ತಾಯಿ ಭುವನೇಶ್ವರಿ ದೇವಿ ಕಂಚಿನ ಪ್ರತಿಮೆ ಅನಾವರಣ ಗೊಳಿಸಿದಮುಖ್ಯಮಂತ್ರಿ ಸಿದ್ದರಾಮಯ್ಯ

39

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು

. ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸುವ ಮೂಲಕ 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಬಗ್ಗೆ ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು.

ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ ಎಂದರು.

ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು.

ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚು ಹೆಚ್ಚು ಕಲಿಯಬೇಕು ಎಂದರು ಕರೆ ನೀಡಿದರು. ‘ನಾಡದೇವತೆ ಭುವನೇಶ್ವರಿ ಭವನ’ ಬೃಹತ್ ಸಭಾಂಗಣ ಸದ್ಯದಲ್ಲೇ ನಿರ್ಮಾಣ:

ಸಿಎಂ ಸಿದ್ದರಾಮಯ್ಯ ಘೋಷಣೆ ಇದೇ ವೇಳೆ ಕನ್ನಡಪರ ಹೋರಾಟಗಾರರ ವಿರುದ್ಧದ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು

. ಈ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ

. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...