ಸೈಫ್ ಅಲಿ ಖಾನ್ ಚಾಕು ಇರಿತ  ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಮಹಿಳೆ ಬಂಧನ

55

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.

ದಾಳಿಗೆ ಸಂಬಂಧಿಸಿದಂತೆ ಈ ಹಿಂದೆ ಮುಂಬೈನಲ್ಲಿ ಬಂಧನಕ್ಕೊಳಗಾಗಿದ್ದ ಬಾಂಗ್ಲಾದೇಶದ ಪ್ರಜೆ ಬಳಸಿದ ಸಿಮ್ ಮಹಿಳೆಯ ಹೆಸರಿನಲ್ಲಿ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಮುಂಬೈ ಪೊಲೀಸರ ಇಬ್ಬರು ಸದಸ್ಯರ ತಂಡ ಮಹಿಳೆಯೊಬ್ಬರನ್ನು ನಾಡಿಯಾ ಜಿಲ್ಲೆಯ ಚಾಪ್ರಾದಿಂದ ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಮುಂಬೈಗೆ ಕರೆದೊಯ್ಯಲು ಟ್ರಾನ್ಸಿಟ್ ರಿಮಾಂಡ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ. ಬಂಧಿತ ಮಹಿಳೆಯನ್ನು ಖುಖುಮೋನಿ ಜಹಾಂಗೀರ್ ಶೇಖ್ ಎಂದು ಗುರುತಿಸಲಾಗಿದೆ. ಈಕೆ ಬಾಂಗ್ಲಾದೇಶಿ ಶರೀಫುಲ್ ಫಕೀರ್‌ಗೆ ಪರಿಚಿತರಾಗಿದ್ದರು ಎನ್ನಲಾಗಿದೆ

.ಭಾರತ- ಬಾಂಗ್ಲಾದೇಶ ಗಡಿ ಮೂಲಕ ಉತ್ತರ ಬಂಗಾಳದ ಸಿಲಿಗುರಿಯ ಬಳಿ ಅಕ್ರಮವಾಗಿ ದೇಶ ಪ್ರವೇಶಿಸಿದ್ದ ಫಕೀರ್ ಈ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದೆ. ಮಹಿಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಆಂಡುಲಿಯಾ ನಿವಾಸಿ ಎಂದು ಮೂಲಗಳು ಹೇಳಿವೆ.

ಜನವರಿ 16 ರ ಮುಂಜಾನೆ, ಮುಂಬೈನ ಬಾಂದ್ರಾ ನಿವಾಸದಲ್ಲಿ ಸೈಫ್ ಅಲಿ ಖಾನ್ ಖಾನ್ ಆರು ಬಾರಿ ಚಾಕು ಇರಿತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಪಡೆದಿದ್ದರು. ಜನವರಿ 21 ರಂದು ಅವರು ಆಸ್ಪತ್ರೆಯಿಂದ ಬಿಡುಗಡೆಯಾದರು.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...