ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ:: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

4

ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಸೇರಿದ್ದು, ಅಮೃತ ಸ್ನಾನ ಮಾಡಲು ಸರದಿ ಸಾಲಿನಲ್ಲಿ ತೆರಳಿದ್ದಾರೆ.

ಆದರೆ, ಭಕ್ತರು ಸಂಖ್ಯೆ ಹೆಚ್ಚಾದ ಕಾರಣ ಕಾಲ್ತುಳಿತವಾಗಿದ್ದು, ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದ್ದಾರೆ. ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದ್ದು, ಈ ವೇಳೆ ಕೆಲ ಭಕ್ತರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಕಳೆದ ರಾತ್ರಿಯಿಂದ ಮೌನಿ ಅಮವಾಸ್ಯೆ ಮಹೂರ್ತ ಆರಂಭವಾದಾಗಿದ್ದು, ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪರಿಸ್ಥಿತಿಯ ವರದಿಗಳನ್ನು ನಿರಂತರವಾಗಿ ಅವಲೋಕನ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ಇದೂವರೆಗೆ ನಾಲ್ಕು ಬಾರಿ ಮಾತಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪರಿಸ್ಥಿತಿಯ ವರದಿಗಳನ್ನು ನಿರಂತರವಾಗಿ ಪಡೆದುಕೊಳ್ಳುತ್ತಿದ್ದಾರೆಂದು ತಿಳಿಸಿದರು

. ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು. ಕುಂಭಮೇಳ ನಡೆಯುತ್ತಿರುವ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ.

ಭಕ್ತರು ಸಂಗಮದ ಬಳಿಗೇ ಸಮೀಪದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬಹುದು. ಅಲ್ಲಿಯೂ ಸಂಗಮದ ನೀರು ಬರುತ್ತಿದೆ. ಭಕ್ತರ ಅನುಕೂಲಕ್ಕಾಗಿ ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ.

ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳ ವ್ಯವಸ್ಥೆಗಳಿವೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರದ ಪ್ರಕಾರ ಬುಧವಾರ ಬೆಳಿಗ್ಗೆ 10 ಗಂಟೆಯವರೆಗೆ 3.61 ಕೋಟಿ ಭಕ್ತರು ಸಂಗಮದಲ್ಲಿ ಸ್ನಾನ ಮಾಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸ್ಥಗಿತಗೊಳಿಸಲಾಗಿದ್ದ ಅಮೃತ ಪುಣ್ಯ ಸ್ನಾನವನ್ನು ಪುನರಾರಂಭಿಸಲಾಗಿದೆ ಎಂದು ವರದಿಗಳು ತಿಳಿಸಿವೆ.



Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...