ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ  ಮನವಿ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನಿಯೋಗ

3

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಪದಾಧಿಕಾರಿಗಳು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.

ಮನವಿಯಲ್ಲಿ ಇರುವ ಬೇಡಿಕೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ನಮ್ಮ ಮನವಿ ಹೀಗಿದೆ: ನಮ್ಮ ದೇಶದಲ್ಲಿ ಮಹಿಳೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಎದುರಿಸುತ್ತಿರುವ ಅಪೌಷ್ಠಿಕತೆ, ರಕ್ತಹೀನತೆ, ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕುವ ಹಿನ್ನೆಲೆಯಲ್ಲಿ

ಕಳೆದ 50 ವರ್ಷಗಳ ಹಿಂದೆ ಆರಂಭಿಸಿದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್) ಪರಿಣಾಮಕಾರಿಯಾಗಲು ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಶ್ರಮವಹಿಸಿ ಕೆಲಸ ನಿರ್ವಹಿಸುತ್ತಿದ್ದೇವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಐ.ಸಿ.ಡಿ.ಎಸ್ ಯೋಜನೆಯಲ್ಲಿ ಮೂರರಿಂದ ಆರು ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಪೂರಕ ಪೌಷ್ಠಿಕ ಆಹಾರ ವಿತರಣೆ, ಮಕ್ಕಳಿಗೆ ಚುಚ್ಚುಮದ್ದು ಕೊಡಿಸುವುದು, ಭಾಗ್ಯಲಕ್ಷ್ಮಿ, ಮಾತೃವಂದನಾ ಅರ್ಜಿಯನ್ನು ಫಲಾನುಭವಿಗಳಿಗೆ ನೀಡುವುದು.

ಬಿ.ಎಲ್.ಒ ಕೆಲಸ, ಕೇಂದ್ರ ಸರ್ಕಾರ ಯೋಜನೆಯಲ್ಲಿ ಪೋಷಣ್ ಟ್ರ್ಯಾಕರ್‌ನಲ್ಲಿ ಮಕ್ಕಳು ಮತ್ತು ಗರ್ಭಿಣಿ & ಬಾಣಂತಿಯರ ತೂಕ, ಎತ್ತರ ಅಳವಡಿಸುವುದು. 2020-2021-2022 ರಲ್ಲಿ ಕರೋನಾ ವಾರಿಯರ್ಸ್ ಗಳಾಗಿ, ಹೀಗೆ ಹತ್ತು ಹಲವು ಕೆಲಸಗಳನ್ನು ಕಾರ್ಯಕರ್ತೆಯರಿಂದ 50 ವರ್ಷಗಳಿಂದ ಮಾಡಿಸುತ್ತಿದೆ.

ಕನಿಷ್ಠ ಕೂಲಿಯನ್ನು ನೀಡುತ್ತಿಲ್ಲ. 11,000/ ರೂ ಗೌರವಧನ ಆಧಾರದಲ್ಲಿ ಮಹಿಳೆಯರನ್ನು ಹೀಗೆ ದುಡಿಸಿಕೊಳ್ಳುತ್ತಿರುವುದನ್ನು ನಮ್ಮ ಸಂಘಟನೆಯಿಂದ ಖಂಡಿಸುತ್ತೇವೆ.

ನಮ್ಮ ಮುಖ್ಯ ಬೇಡಿಕೆಗಳು:- 1.ಅಂಗನವಾಡಿ ಕಾರ್ಯಕರ್ತೆಯರಿಗೆ 25,000 ರೂ ಹಾಗೂ ಸಹಾಯಕಿಯರಿಗೆ 12,000 ಸಾವಿರ ರೂ ಕನಿಷ್ಠವೇತನವನ್ನು ನೀಡಬೇಕು.

2. ಅಂಗನವಾಡಿ ಕಾರ್ಯಕರ್ತೆಯರನ್ನು ಸಿ.ದರ್ಜೆ ಎಂದು & ಸಹಾಯಕಿಯರನ್ನು ಡಿ.ದರ್ಜೆ ಸರ್ಕಾರಿ ನೌಕರರೆಂದು ಪರಿಗಣಿಸಿ, ಗುಜರಾತ್ ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ನಮ್ಮ ಕರ್ನಾಟಕದಲ್ಲಿಯೂ ಜಾರಿ ಮಾಡಿ, ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಎಂದು ಮನವಿ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...