ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಕೆ ಪ್ರಮೋದ್ ಮುತಾಲಿಕ್ ಆಕ್ರೋಶ

1
ನೇಹಾ ಹಿರೇಮಠ್ ಹತ್ಯೆ ಮಾಡಿದ್ರೂ ವ್ಯಾಸಂಗ ಮುಂದುವರಿಕೆ, ಮುತಾಲಿಕ್ ಆಕ್ರೋಶ, ಕೊಲೆ ಆರೋಪಿ ಫಯಾಜ್ ಅಮಾನತು!

ಕಳೆದ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲೇ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಕಾಲೇಜಿನಲ್ಲಿ ವ್ಯಾಸಂಗ ಮುಂದುವರೆಸಿರುವ ವಿಚಾರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ


ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಮತ್ತೆ ಸುದ್ದಿಗೆ ಬಂದಿದ್ದು, ಕೊಲೆ ಆರೋಪಿ ಫಯಾಜ್ ತನ್ನ ಕಾಲೇಜು ವ್ಯಾಸಂಗ ಮುಂದುವರೆಸಿರುವ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರೋಪಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.

ಈ ಸಂಬಂಧ ಶ್ರೀರಾಮ ಸೇನೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಸ್ವತಃ ನೇಹಾ ಹಿರೇಮಠ ಓದುತ್ತಿದ್ದ ಪಿ.ಸಿ. ಜಾಬಿನ್ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿದ್ದರು.

ಕೊಲೆ ಮಾಡಿದ ಆರೋಪಿ ಫಯಾಜ್ ನನ್ನು ಈವರೆಗೂ ಏಕೆ ಅಮಾನತ್ತು ಮಾಡಿಲ್ಲವೆಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ ಆರೋಪಿ ಫಯಾಜ್ ನನ್ನು ಅಮಾನತು ಮಾಡಿದೆ.

ಮಾತ್ರವಲ್ಲದೇ ಆತನಿಗೆ ಪರೀಕ್ಷೆಗೂ ಅವಕಾಶ ಕೊಡದಿರಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಪಿಸಿ ಮಾಬಿನ್ ಕಾಲೇಜ್ ಪ್ರಾಂಶುಪಾಲ ಎಲ್.ಡಿ ಹೊರಕೇರಿ, ‘ಫಯಾಜ್ 2022 ರಲ್ಲಿಬಿಸಿಎ ವ್ಯಾಸಂಗ ಮಾಡತಿದ್ದ. ಐದು ಮತ್ತು ಆರನೇ ಸೆಮಿಸ್ಟರ್ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಆಗಿದ್ದ . ಇದೀಗ ಆತನಿಗೆ ನಾವು ಆತ ಕಾಲೇಜಿಗೆ ಬರಲು ಅನುಮತಿ ಕೊಡುವುದಿಲ್ಲ.

ನಾವು ಪರಿಪೂರ್ಣವಾಗಿ ಆತನನ್ನು ಅಮಾನತು ಮಾಡಿದ್ದೇವೆ ಎಂದು ಹೇಳಿದ್ದಾರೆ. ಸಿಬಿಐ ತನಿಖೆಗೆ ಆಗ್ರಹ ಇನ್ನು ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸುತ್ತಿವೆ.

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಈ ಸಂಬಂದ ಹೋರಾಟ ಆರಂಭಿಸಿದ್ದರು. ಅಲ್ಲದೆ ನೇಹಾ ಕೊಲೆಯಲ್ಲಿ ಪ್ರಭಾವಿ ಶಾಸಕನ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...