ವಿತ್ತ ಸಚಿವ ನಿರ್ಮಲ ಸೀತಾರಾಮ್ ರಿಂದ ಬಜೆಟ್ ಮಂಡನೆಗೆ ಕ್ಷಣಗಣನೆ ಸತತ ಎಂಟು ಬಾರಿ ಬಜೆಟ್ ಮಂಡನೆ ಮಾಡಿದ ಮೊದಲ ಸಚಿವೆ

2

ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದರೊಂದಿಗೆ ಸತತ 8ನೇ ಬಜೆಟ್ ಮಂಡಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.

ಈ ಬಾರಿಯ ಬಜೆಟ್ ಕುರಿತು ವಿವಿಧ ವಲಯಗಳು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. 140 ಕೋಟಿ ಭಾರತೀಯರ ಕನಸುಗಳು ಈಡೇರಿಸುವ ಹಂಬಲ ಹೊತ್ತಿರುವ ಕೇಂದ್ರ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ.

ದೇಶಧ ಆರ್ಥಿಕ ಚಟುವಟಿಕೆಗೂ ಉತ್ತೇಜನ ನೀಡಬೇಕು, ಹಣದುಬ್ಬರದ ಸುಳಿಗೆ ಸಿಲುಕಿರುವ ಬಡವರು, ಮಧ್ಯಮ ವರ್ಗದ ಜನರು ಮತ್ತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಪೂರಕವಾದ ಬಜೆಟ್ ಮಂಡಿಸುವ ಸವಾಲು ಕೇಂದ್ರದ ಮುಂದಿದೆ. ಹೀಗಾಗಿ ನಿರೀಕ್ಷೆಗಳು ಸಾಕಷ್ಟಿದ್ದು, ಸರ್ಕಾರ ಹೇಗೆ ಸಮತೋಲನ ಸಾಧಿಸಲಿದೆ ಎಂಬ ಕುತೂಹಲವು ಇದೆ

. ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನುದ್ದೇಶಿಸಿ ಮಾತಾಡಿದ ಮೋದಿಯವರು, ಬಡವರು ಹಾಗೂ ಮಧ್ಯಮ ವರ್ಗದವರ ಮೇಲೆ ಕೃಪೆ ತೋರುವಂತೆ ಲಕ್ಷ್ಮೀದೇವಿಯಲ್ಲಿ ಪ್ರಾರ್ಥಿಸಿದ್ದೇನೆ.

ಮಹಿಳೆಯರಿಗೆ ಸಮಾನ ಅವಕಾಶ ಲಭಿಸುವಂತೆ ಅವರ ಸಶಕ್ತೀಕ ರಣಕ್ಕೆ ಅಗತ್ಯವಾದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಹಾಗೂ ತಾರತಮ್ಯಗಳನ್ನು ತೊಡೆದುಹಾಕಲಾಗುವುದು ಎಂದು ಹೇಳಿದ್ದರು.

ಈ ಬಾರಿಯ ಬಜೆಟ್ ವಿಕಸಿತ ಭಾರತದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಮತ್ತು ಶಕ್ತಿಯನ್ನು ತುಂಬುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದ ಅವರು, ಅಧಿವೇಶನದ ವೇಳೆ ಹಲವು ಐತಿಹಾಸಿಕ ಬಿಲ್ ಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿಸಿದ್ದರು.

ಇನ್ನು 8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್ಗಳನ್ನು ಮಂಡಿಸಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಎಂಟು ವರ್ಷಗಳ ಕಾಲ ಕೇಂದ್ರ ಬಜೆಟ್ ಅನ್ನು ಮಂಡಿಸುವುದರ ಮೂಲಕ ದಾಖಲೆ ಬರೆಯಲು ಅವರು ಸಜ್ಜಾಗಿದ್ದಾರೆ.

ಮೋದಿಯವರ ಎರಡನೇ ಅವಧಿ ಸರ್ಕಾರ ಅಂದರೆ 2019 ರಲ್ಲಿ ನಿರ್ಮಲಾ ಸೀತಾರಾಮನ್ ಅವರು ದೇಶದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವೆಯಾದರು.

2024ರಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಮೋದಿ ಸರ್ಕಾರದಲ್ಲಿ ಅವರು ಹಣಕಾಸು ಖಾತೆಯನ್ನು ಉಳಿಸಿಕೊಂಡರು. ಸತತ 8ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ವಿವಿಧ ಅವಧಿಗಳಲ್ಲಿ ಮಂಡಿಸಿದ 10 ಬಜೆಟ್ಗಳ ದಾಖಲೆಗಳನ್ನು ಸರಿಗಟ್ಟಲು ಹತ್ತಿರದಲ್ಲಿದ್ದಾರೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.

ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ 9 ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಆರ್ಥಿಕ ಅಭಿವೃದ್ಧಿಯ ಗುರಿ ಹೊತ್ತು ರಾಜ್ಯದಲ್ಲಿ ನೂತನ ಕೈಗಾರಿಕಾ ನೀತಿ 2025-29 ಜಾರಿಗೆ

“ರಾಜ್ಯ ಸರ್ಕಾರ ನೂತನ ಕೈಗಾರಿಕಾ ನೀತಿ 2025-29 ಅನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮಂಗಳವಾರ ಇಲ್ಲಿ...

ನವೀಕೃತ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಮಯ ಮಿತಿ ವಿಸ್ತರಣೆ ::ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2025: ನವೀಕೃತ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಮಯ ಮಿತಿ ವಿಸ್ತರಣೆ ನವೀಕೃತ...