ಭದ್ರತಾ ಪಡೆ ಕಾರ್ಯಾಚರಣೆ ನಕ್ಸಲರ ನಡುವೆ ಗುಂಡಿನ ಕಾಳಗ 8 ನಕ್ಸಲರ ಹತ್ಯೆ

52

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಎಂಟು ನಕ್ಸಲರು ಬಲಿ

ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು “ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ” ಗುಂಡಿನ ಚಕಮಕಿ ನಡೆಯಿತು.


ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ ಮತ್ತು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಮತ್ತು ಅದರ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಾವೋವಾದಿಗಳ ‘ಪಶ್ಚಿಮ ಬಸ್ತಾರ್ ವಿಭಾಗ’ದ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶುಕ್ರವಾರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.


Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...