ಮುಡಾ ಪ್ರಕರಣ ದೂರುದಾರ ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ ಪ್ರಯೋಗ ಪ್ರಸಾದ್ ಅತ್ತಾವರ್ ಸೇರಿ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ದೂರು

39

ನನ್ನ ಮೇಲೆ ವಾಮಾಚಾರ ಹಾಗೂ ವಶೀಕರಣ ಪ್ರಯೋಗ ನಡೆಯುತ್ತಿದೆ ಎಂದು ಮುಡಾ ಭೂ ಅಕ್ರಮ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ಮಂಗಳೂರಿನಲ್ಲಿ ಇತ್ತೀಚಿಗೆ ಬಂಧನಕ್ಕೊಳಗಾದ ಪ್ರಸಾದ್ ಅತ್ತಾವರ ಎಂಬುವರ ಫೋನ್ ಪರಿಶೀಲಿಸಿದಾಗ ನನ್ನ ಮತ್ತು ಗಂಗರಾಜು ಅವರ ಫೋಟೋ ಇಟ್ಟು, ಪ್ರಾಣಿಗಳ ಬಲಿಕೊಟ್ಟು ವಾಮಾಚಾರ ಮಾಡಿರುವುದು ಕಂಡುಬಂದಿದೆ.


ಇದರ ಜೊತೆ ನನ್ನನ್ನು ಭೇಟಿ ಮಾಡಿ ಆಮಿಷವೊಡ್ಡಿದ್ದ ಹರ್ಷ ಮತ್ತು ಶ್ರೀನಿಧಿ ಅವರ ಹೆಸರನ್ನು ಚೀಟಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೆಲ್ಲ ನೋಡಿದಾಗ ಏನೋ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದರು.


ತಮ್ಮ ಹಾಗೂ ಗಂಗರಾಜು ಅವರ ಫೋಟೋ ಇಟ್ಟು ಪ್ರಾಣಿ ಬಲಿ ಕೊಟ್ಟಿರುವ ವಿಚಾರವಾಗಿ ಮಾತನಾಡಿ, ಡಿ.9ರಂದು ಆ ಪೂಜೆಗಳು ನಡೆದಿವೆ, ಡಿ.13ರಂದು ಹರ್ಷ ಮತ್ತು ಶ್ರೀನಿಧಿ ಅವರು ನನ್ನನ್ನು ಭೇಟಿ ಮಾಡಿದ್ದರು. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಸಲ್ಲಿಸಿರುವ ಅರ್ಜಿಯನ್ನು ದಯವಿಟ್ಟು ವಾಪಸ್ ತೆಗೆದುಕೊಳ್ಳಿ

. ನಿಮಗೆ ಎಷ್ಟು ದುಡ್ಡು ಬೇಕೋ ಅಷ್ಟು ಕೊಡುತ್ತೇವೆ ಎಂದು ಅವರು ಹೇಳಿದ್ದರು. ಇದರ ಜೊತೆಗೆ ನನ್ನ ಮಗನ ಜೊತೆ ಮಾತನಾಡಿ, ನಮ್ಮ ಬಾಸ್ ಮಂಗಳೂರಿನಲ್ಲಿದ್ದಾರೆ ಎಂದು ಪ್ರಸಾದ್ ಅತ್ತಾವರ್ ಅವರ ಫೋಟೋ ತೋರಿಸಿ, ಇರುವ ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ. ಅವರೇ ನೀವು ಹೋಗಿ ಕೆಲಸ ಆಗುತ್ತದೆ ಎಂದು ಹೇಳಿ ಕಳುಹಿಸಿದ್ದರು ಎಂದು ಹೇಳಿದ್ದರು

. ಇದರಲ್ಲಿ ಸಾಕಷ್ಟು ಅನುಮಾನಾಸ್ಪದ ಸಂಗತಿಗಳು ಕಂಡು ಬಂದಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ. ಘಟನೆ ಸಂಬಂಧ ಈಗಾಗಲೇ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ವಿಚಾರ ಸಂಬಂಧ ನನ್ನ ಬಳಿ ಇರುವ ಸಾಕ್ಷಿಗಳನ್ನು ಪೊಲೀಸರಿಗೆ ನೀಡುತ್ತೇನೆಂದು ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...