ಪ್ರಯಾಗ್ ರಾಜ್ ಮಹಾಕುಂಭಮೇಳ  ಮೂರನೇ ಪುಣ್ಯ ಸ್ನಾನ ಹರಿದು ಬಂದ ಭಕ್ತ ಸಾಗರ

3

“ಮಹಾಕುಂಭಮೇಳದ 21ನೇ ದಿನದ ಮೂರನೇ ಮತ್ತು ಅಂತಿಮ ಪುಣ್ಯ ಸ್ನಾನವು ಸೋಮವಾರ ಬೆಳಿಗ್ಗೆ 5 ಗಂಟೆಗೆ ಪ್ರಾರಂಭವಾಗಿದ್ದು, ಮಂತ್ರಗಳ ಪಠಣ-‘ಹರ್ ಹರ್ ಮಹಾದೇವ್’ ಘೋಷಣೆಗಳು ಮುಗಿಲು ಮುಟ್ಟಿದೆ.

ಭಾನುವಾರ ಬೆಳಿಗ್ಗೆ 9:44 ಕ್ಕೆ ಬಸಂತ್ ಪಂಚಮಿ ಆರಂಭವಾಗುತ್ತಿದ್ದಂತೆ, ಸಾಮಾನ್ಯ ಭಕ್ತರು ಅಮೃತ ಸ್ನಾನವನ್ನು ಪ್ರಾರಂಭಿಸಿದರು. ಇಂದು ಬೆಳಿಗ್ಗೆ 5 ಗಂಟೆಯಿಂದ ಸಾಧುಗಳು ಪುಣ್ಯ ಸ್ನಾನವನ್ನು ಆರಂಭಿಸಿದರು.

ಈ ನಡುವೆ ಮೌನಿ ಅಮಾವಾಸ್ಯೆಯಂದು ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದ ಹಿನ್ನೆಲೆ ಇಂಂದು ನಡೆಯುತ್ತಿರುವ ಅಮೃತ ಸ್ನಾನದ ಮೇಲೆ ಉತ್ತರಪ್ರದೇಶ ಸರ್ಕಾರ ಹದ್ದಿನ ಕಣ್ಣು ಇರಿಸಿದೆ, ತ್ರಿವೇಣಿ ಸಂಗಮದ ಘಾಟ್‌ಗಳ ಮೇಲೆ ನಿಗಾ ವಹಿಸಿರುವ ಪೊಲೀಸರು ಯಾವುದೇ ಅವಘಡಗಳಾಗದಂತೆ ಎಚ್ಚರಿಕೆ ವಹಿಸಿದ್ದಾರೆ.

ಮಹಾಕುಂಭದ ಎಲ್ಲಾ 25 ಸೆಕ್ಟರ್‌ಗಳು ಹಾಗೂ 30 ಪಾಂಟೂನ್ ಸೇತುವೆಗಳು ಮತ್ತು ಪ್ರಮುಖ ಬ್ಯಾರಿಕೇಡ್ ವಲಯಗಳ ಮೇಲ್ವಿಚಾರಣೆ ನಡೆಸಲಾಗಿದೆ. ಕಂಟ್ರೋಲ್ ರೂಂ ಮೂಲಕ ಕುಂಭ ಕಮಾಂಡ್ ತಂಡದಿಂದ ಮೇಲ್ವಿಚಾರಣೆ ನಡೆಸಲಾಗಿದೆ.

3,000ಕ್ಕೂ ಅಧಿಕ ಕ್ಯಾಮೆರಾ ಮೂಲಕ ನಿಗಾ ಇರಿಸಲಾಗಿದೆ. ಸ್ನಾನದ ನಂತರ ಘಾಟ್‌ಗಳಲ್ಲಿ ಕಾಲಹರಣ ಮಾಡದಂತೆ, ಊಟೋಪಚಾರ ಮಾಡದಂತೆ ಸರ್ಕಾರದಿಂದ ಮನವಿ ಮಾಡಲಾಗಿದೆ. ಸ್ನಾನದ ಬಳಿಕ ಘಾಟ್‌ನಿಂದ ನಿರ್ಗಮಿಸಿ ಗೊತ್ತುಪಡಿಸಿದ ಸ್ಥಳಗಳಲ್ಲಿ ಊಟೊಪಚಾರಕ್ಕೆ ಸಲಹೆ ನೀಡಲಾಗಿದೆ.

ಈಗಾಗಲೇ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸಭೆ ನಡೆಸಿದ್ದಾರೆ. ಈ ಹಿಂದೆ ಯಶಸ್ವಿ ಕುಂಭಮೇಳ ನಿಭಾಯಿಸಿದ್ದ ಇಬ್ಬರು ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸಂತ ಪಂಚಮಿಯ ‘ಅಮೃತ ಸ್ನಾನ’ದ ಕುರಿತು ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದು, ಬೆಳಿಗ್ಗೆ 3.30 ರಿಂದ ತಮ್ಮ ಅಧಿಕೃತ ನಿವಾಸದ ವಾರ್ ರೂಮಿನಲ್ಲಿ ಡಿಜಿಪಿ, ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಮಹಾಕುಂಭ ಮೇಳದಲ್ಲಿ ನಡೆಯುವ ಪವಿತ್ರ ಶಾಹಿಸ್ನಾನಗಳಲ್ಲಿ ವಸಂತ ಪಂಚಮಿ ಪ್ರಮುಖವಾಗಿದೆ. ಫೆ.12ರಂದು ಮಾಫ ಪೂರ್ಣಿಮೆ ಮತ್ತು ಫೆ.26ರಂದು ಮಹಾಶಿವರಾತ್ರಿಯ ದಿನ ಕೊನೆ ಪುಣ್ಯ ಸ್ನಾನ ನೆರವೇರಲಿವೆ

. ಜ.13ರಂದು ಆರಂಭವಾದ ಕುಂಭಮೇಳಕ್ಕೆ ಇದೂವರೆಗೆ 33 ಕೋಟಿ ಭಕ್ತರು ಭೇಟಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...