ನಿರ್ಮಾಣ ಹಂತ ಕಟ್ಟಡದಲ್ಲಿ ಬೆಂಕಿ ಅವಘಡ ಇಬ್ಬರು ಕಾರ್ಮಿಕರ ಮತ್ಯು

2

“ಬೆಂಗಳೂರಿನ ಉತ್ತರ ತಾಲೂಕಿನ ಸೀಗೆಹಳ್ಳಿಯಲ್ಲಿ ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಗುರುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ. ಮೃತ ಕಾರ್ಮಿಕರಲ್ಲಿ ಒಬ್ಬ ಪೇಂಟರ್, ಮತ್ತೊಬ್ಬರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು.


ಕಡಬಗೆರೆ ಕ್ರಾಸ್‍ನಲ್ಲಿ ಸತೀಶ್ ಎಂಬುವರು ನಾಲ್ಕು ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿದ್ದು, ಕೆಲ ಕಾರ್ಮಿಕರು ಈ ಕಟ್ಟಡದಲ್ಲೇ ಅಡುಗೆ ಮಾಡಿಕೊಂಡು ಅಲ್ಲೇ ವಾಸವಿರುತ್ತಾರೆ. ಇಂದು ಮಧ್ಯಾಹ್ನ ಈ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಅಕ್ಕ-ಪಕ್ಕದವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ದಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಾಗಲೇ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆಗೆ ಬಳಸುವ ಸಿಲಿಂಡರ್‍ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡು ಅಗ್ನಿ ಅವಘಡ ಸಂಭವಿಸಿರಬಹುದೇ ಅಥವಾ ವೆಲ್ಡಿಂಗ್ ಮಾಡುವಾಗ ಬೆಂಕಿ ಕಿಡಿಯಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...