ಬಿಟ್ ಕಾಯಿನ್ ಹಗರಣ ಎಸ್ಐಟಿ ಮುಂದೆ ಹಾಜರಾದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್

2

“ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ಪ್ರಕರಣ ಸಂಬಂಧ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ ಮಾಡಿತ್ತು. ಆದರೆ ವೈಯಕ್ತಿಕ ಕಾರಣಕ್ಕಾಗಿ ಇಂದೇ ಎಸ್ಐಟಿ ಮುಂದೆ ನಲಪಾಡ್ ಹಾಜರಾದರು.

2017 ಮತ್ತು 2018ರ ನಡುವೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮಾಡಿದ ಖರ್ಚುಗಳಿಗೆ, ಐಷಾರಾಮಿ ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ, ಪ್ರಯಾಣ ಮತ್ತು ಇತರ ಖರ್ಚುಗಳಿಗೆ ಪಾವತಿಸಿದ ಹಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ಮತ್ತು ಅವರ ಸಹೋದರ ಒಮರ್ ಹ್ಯಾರಿಸ್



ಅವರನ್ನು 2024ರ ಜೂನ್ ನಲ್ಲಿ ಎರಡು ದಿನಗಳಿಗೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದರು. ಶ್ರೀಕಿಯನ್ನು ನವೆಂಬರ್ 2020ರಲ್ಲಿ ಬಂಧಿಸಲಾಗಿತ್ತು. ಬಿಟ್‌ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಸಾಕ್ಷ್ಯಗಳನ್ನು ನಾಶಪಡಿಸಿ, ಕ್ರಿಪ್ಟೋಕರೆನ್ಸಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ

ಎಂಬ ಆರೋಪದ ಮೇಲೆ ಎಸ್‌ಐಟಿ ಎರಡು ಚಾರ್ಜ್‌ಶೀಟ್‌ಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. 2023ರ ಜೂನ್ ನಲ್ಲಿ ಬಿಟ್‌ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ


. 2017ರ ಜೂನ್ 23ರಂದು ಕರ್ನಾಟಕದಲ್ಲಿ ಯುನೊಕಾಯಿನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‌ನ ಕ್ರಿಪ್ಟೋ ವಿನಿಮಯ ಕೇಂದ್ರವನ್ನು ಹ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಮತ್ತು ಅವರ ಲೆಕ್ಕಪರಿಶೋಧಕ ರಾಬಿನ್ ಖಂಡೇಲ್ವಾಲ್ ವಿರುದ್ಧ ಕಳೆದ ವರ್ಷ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಿತು.

ಈ ವೇಳೆ 60.6 ಬಿಟ್‌ಕಾಯಿನ್‌ಗಳ ಕಳ್ಳತನವಾಗಿದ್ದು ಆ ಸಮಯದಲ್ಲಿ ಪ್ರತಿ ಬಿಟ್‌ಕಾಯಿನ್‌ಗೆ 1.67 ಲಕ್ಷ ರೂ. ಚಾಲ್ತಿಯಲ್ಲಿರುವ ದರದ ಆಧಾರದ ಮೇಲೆ ಇವುಗಳ ಮೌಲ್ಯ 1.14 ಕೋಟಿ ರೂಪಾಯಿಗಳಷ್ಟಿತ್ತು.


ಸಿಐಡಿಯ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್ 12ರಂದು ಮೊಹಮ್ಮದ್ ನಲಪಾಡ್ ಎಸ್ಐಟಿ ಮುಂದೆ ಹಾಜರಾಗಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...