ಪ್ರಯಾಗ್ ರಾಜ್  ಮಹಾಕುಂಭಮೇಳ ಕುಟುಂಬ ಸಮೇತ ಪುಣ್ಯ ಸ್ನಾನ ಮಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

2

144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭಾಗಿಯಾಗಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭಾಗಿಯಾಗಿದ್ದು, ಇಂದು(ಫೆಬ್ರವರಿ 09) ಪತ್ನಿ ಉಷಾ ಅವರ ಜೊತೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್‌ರಾಜ್‌ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿಕೆಶಿ ದಂಪತಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರೂ ಕೂಡ ಸಾಥ್ ನೀಡಿದರು. ಅವರ ಜೊತೆಯಲ್ಲೇ ಡಿಕೆಶಿ ದಂಪತಿ ಮಹಾಕುಂಭಮೇಳದಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು.

ವಿಶೇಷ ಪೂಜೆ ಗಂಗಾ, ಯಮುನಾ ಮತ್ತು ಸರಸ್ವತಿ ಎಂಬ ಮೂರು ನದಿಗಳ ಸಂಗಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನು ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ಡಿಕೆಶಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದು

, ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ.

144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ.

ಉತ್ತಮ ವ್ಯವಸ್ಥೆ ಇನ್ನು ಪವಿತ್ರ ಸ್ನಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಕುಂಭಮೇಳವನ್ನು ಇಷ್ಟೊಂದು ಪವಿತ್ರ ರೀತಿಯಲ್ಲಿ ನಡೆಸಿದ್ದಕ್ಕಾಗಿ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.

ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಇಲ್ಲಿ ನೆರೆದಿರುವ ಲಕ್ಷಾಂತರ ಜನರು ವ್ಯವಸ್ಥೆಗಳನ್ನು ವೀಕ್ಷಿಸುತ್ತಿದ್ದಾರೆ. ಅಂತಹ ಕಾರ್ಯಕ್ರಮವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ ಎಂದು ನನಗೆ ಅರ್ಥವಾಗಿದೆ. ಇದನ್ನು ಸಾಧ್ಯವಾಗಿಸಲು ಎಷ್ಟು ಶ್ರಮ ಬೇಕಾಗುತ್ತದೆ ಎಂದು ನನಗೆ ತಿಳಿದಿದೆ” ಎಂದು ಹೇಳಿದರು.

ಪವಿತ್ರಸ್ನಾನ ಟೀಕಿಸಿದ್ದ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾಕುಂಭದಲ್ಲಿ ಪುಣ್ಯಸ್ನಾನ ಮಾಡಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕೆ ಮಾಡಿದ್ದರು. ಇದು ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿತ್ತು.

ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಗಮನಸೆಳೆದಿದ್ದಾರೆ.

ಅಂದಹಾಗೆ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪೂಜ್ಯ ಮತ್ತು ಆಧ್ಯಾತ್ಮಿಕವಾಗಿ ಸಂಗಮವಾಗಿದೆ. ಹೀಗಾಗಿ ಇಲ್ಲಿ ಸ್ನಾನ ಮಾಡುವುದನ್ನು ಪುಣ್ಯಸ್ನಾನ ಎಂದು ಕರೆಯಲಾಗುತ್ತದೆ

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...