ಇಡಿ ನೋಟೀಸ್ ಗೆ ತಡೆಯಜ್ಞೆ ನೀಡಿದ ಹೈಕೋರ್ಟ್ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶಗ ಸ್ವಲ್ಪ ನಿರಾಳ

34

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.


ಇಡಿ ಸಮನ್ಸ್ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ. 20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.


ಇದರಿಂದ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ

. ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು. ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್, ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ.

ಇದರಲ್ಲಿ ಬೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ.14 ಸೈಟ್ ಹಂಚಿಕೆಗೂ ಬೈರತಿ ಸುರೇಶ್ ಗೂ ಸಂಬಂಧವಿಲ್ಲ. ಮುಡಾದಲ್ಲಿ ಬೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇಡಿ ಸಮನ್ಸ್ ಕಾನೂನುಬಾಹಿರವೆಂದು ಮನವಿ ಮಾಡಿದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...