ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕುಂಭಮೇಳಕ್ಕೆ ಹೊರಟ ಯಾತ್ರಿ ಗಳು ಕಾಲ್ತುಳಿತಕ್ಕೆ 18ಮಂದಿ ಬಲಿ

58

“ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಭಾರತೀಯ ರೈಲ್ವೇ ಇಲಾಖೆ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಅಂತೆಯೇ ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.

ದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಗ್ರಾಜ್ ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ

. ಪ್ಲಾಟ್ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್ರಾಜ್ಗೆ ಹೊರಡುವ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ. ಈ ಘಟನೆಯಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Leave a comment

Leave a Reply

Your email address will not be published. Required fields are marked *

Related Articles

5ನೇ ತಲೆಮಾರಿನ ದೇಶಿಯ ಯುದ್ಧ ವಿಮಾನಗಳನ್ನು ಜಂಟಿಯಾಗಿ ನಿರ್ಮಿಸಲು ಭಾರತಕ್ಕೆ ಆಫರ್ ನೀಡಿದ,:: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ದೇಶೀಯವಾಗಿ ನಿರ್ಮಿಸಲು ಮುಂದಾಗಿರುವ ಭಾರತಕ್ಕೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್...

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ ಎಂಬ ಭ್ರಮೆಯಿಂದ ಹೊರಬರಬೇಕು : ನಿತಿನ್ ನಬಿನ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನಿನ್ನೆ ಭಾನುವಾರ ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರಿಗೆ,...

ದೇಶದ ಮೊದಲ ಬುಲೆಟ್ ಟ್ರೈನ್ ಮಾದರಿ ಚಿತ್ರ ಅನಾವರಣ

“ನವದೆಹಲಿ: ಜಪಾನ್, ಚೀನಾ, ಜರ್ಮನಿಯಲ್ಲಿ ಅತ್ಯಂತ ಜನಪ್ರಿಯವಾಗಿರುವ ಬುಲೆಟ್ ರೈಲು ಇದೀಗಾ ಭಾರತಕ್ಕೆ ಬರುತ್ತಿದ್ದು, ದೇಶದ...

ಪೋಕ್ಸೋ ಪ್ರಕರಣ :: ಲುಕ್ ಔಟ್ ನೋಟಿಸ್ ಜಾರಿ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವರ ಪುತ್ರ!

ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ...