ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನಾಯಕತ್ವ ಅಗತ್ಯ ಇದೆ ಸಚಿವ ಸತೀಶ್ ಜಾರಕಿಹೊಳಿ

3

“ಕಾಂಗ್ರೆಸ್‌ನಲ್ಲಿ ಹೊಸ ನಾಯಕತ್ವ ಸಿದ್ದಗೊಳ್ಳುವವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.


ಬೆಂಗಳೂರಿನಲ್ಲಿ ಶನಿವಾರ ಮಾತನಾಡಿರುವ ಅವರು, ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ. ಈ ಮೂಲಕ ಅಧಿಕಾರ ಹಸ್ತಾಂತರದ ವಿರುದ್ಧವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ನಮಗೆ ಬೇಕೆ ಬೇಕು. ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು.

ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಅವರು ಇರಬೇಕು. ಸಿದ್ದರಾಮಯ್ಯ ಇರಬೇಕು ಎಂಬ ಆಸೆ ಇದೆ, ಹೊಸ ನಾಯಕತ್ವ ತಯಾರಾಗುವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಆಶಯ ಕೂಡ ಅದೆ ಇದೆ. ಚುನಾವಣೆ ನಿವೃತ್ತಿ ಆದ್ರೂ ಸಕ್ರಿಯ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು. ಚುನಾವಣೆ ಗೆಲ್ಲಲು ಅನಕೂಲ ಆಗುತ್ತೆ. ಇನ್ನೊಂದು ಅವಧಿಯವರೆಗೆ ರಾಜಕೀಯ ಅವರು ಇರಬೇಕು ಎಂದು ಹೇಳಿದರು.


ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ತೀರ್ಮಾನ ‌ಮಾಡ್ತಾರೆ. ಕರ್ನಾಟಕ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ.

ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದು ತಿಳಿಸಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ ವಿಚಾರವಾಗಿ ಇದೇ ವೇಳೆ ಮಾತನಾಡಿದ ಅವರು, ಉಸ್ತುವಾರಿಗಳ ಬದಲಾವಣೆ ಬಗ್ಗೆ ಗೊತ್ತಿಲ್ಲ.

ನಮ್ಮ ವ್ಯಾಪ್ತಿಯಲ್ಲಿ ಅದು ಇಲ್ಲ. ಇದನ್ನು ರಾಹುಲ್ ಗಾಂಧಿ ನಿರ್ಧಾರ ‌ಮಾಡ್ತಾರೆ. ಬೇರೆ ರಾಜ್ಯಗಳ ಉಸ್ತುವಾರಿ ಬದಲಾವಣೆ ಆಗಿದೆ. ಸುರ್ಜೇವಾಲ ಈಗ ಇದ್ದಾರೆ, ಅದರ ಬಗ್ಗೆ ಏನು ಹೇಳಲ್ಲ ಎಂದರು.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...