ರಾಜ್ಯದಲ್ಲಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಿದ್ಧತೆ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

3

ರಾಜ್ಯದಲ್ಲಿ ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಅದೇ ಪದವೀಧರರನ್ನು ರೂಪಿಸುವ ವಿಶ್ವವಿದ್ಯಾಲಯಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕಿಡಿಕಾರಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ,

ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಶಿಕ್ಷಣ ಸರ್ವರ ಮೂಲಭೂತ ಹಕ್ಕು


. ಆದರೆ, ರಾಜ್ಯ ಸರ್ಕಾರ ಇದನ್ನು ಕಸಿದುಕೊಳ್ಳುತ್ತಿದೆ. ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ.

ಇದರಿಂದಾಗಿ ಶಿಕ್ಷಣದ ಮೂಲಭೂತ ಹಕ್ಕಿಗೆ ಕೊಡಲಿ ಪೆಟ್ಟು ಬೀಳುತ್ತಿದೆ, ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಗಳನ್ನೂ ಆದಾಯದ ಮೂಲ ಮತ್ತು ಒಂದು ಸರಕನ್ನಾಗಿ ನೋಡುತ್ತಿರುವುದು ಖಂಡನೀಯ.

ವಿವಿಗಳು ಆರ್ಥಿಕ ಮತ್ತು ಅಗತ್ಯ ಭೂಮಿಯ ಕೊರತೆ ಎದುರಿಸುತ್ತಿವೆ ಎಂಬ ಕುಂಟು ನೆಪವೊಡ್ಡುವ ಈ ಸರ್ಕಾರವೇ ಮೊದಲು ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಟೀಕಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸುವ ಮೊದಲು, ತಮ್ಮದೇ ಸರ್ಕಾರ ಮತ್ತು ಇಲಾಖೆಗಳ ಆರ್ಥಿಕ ಸ್ಥಿತಿಯನ್ನು ನಿರ್ಣಯಿಸಬೇಕು ಎಂದು ಸಲಹೆ ನೀಡಿದರು.

ಇದಲ್ಲದೆ, ಸರ್ಕಾರ ಕರ್ನಾಟಕ ಕರಾವಳಿ ಭದ್ರತೆಗೆ ಬೇಕಿರುವ ಅಗತ್ಯ ಇಂಧನವನ್ನು ಕಡಿತಗೊಳಿಸಿಸಲು ಆದೇಶಿಸಿದೆ. ಕರಾವಳಿ ಭದ್ರತೆಯ ವಿಚಾರದಲ್ಲಿ ಇಂಧನ ಕಡಿತಗೊಳಿಸಿರುವದು ಇವರ ಆಡಳಿತ ವೈಫಲ್ಯದ ನಿದರ್ಶನ ಎಂದು ಕಿಡಿಕಾರಿದರು

, ಚುನಾವಣೆ ವೇಳೆ ಜನರಿಗೆ ಅವೈಜ್ಞಾನಿಕ ರೀತಿಯ ಭರವಸೆಗಳನ್ನು ನೀಡಿ ಇತ್ತ ಅವನ್ನೂ ನೀಡಲಾಗದೆ, ಜನರಿಗೆ ಬೆಲೆ ಏರಿಕೆ ಬರೆ ಎಳೆದು ಹಿಂಸೆ ಮಾಡುತ್ತಿದೆ. ಆಡಳಿತದಲ್ಲಿ ಭ್ರಷ್ಟಾಚಾರದ ಪರಾಕಾಷ್ಟೆ ಮೀರಿದೆ ಎಂದು ಆರೋಪಿಸಿದರು.

ವ್ಯಾಪಕ ಭ್ರಷ್ಟಾಚಾರ, ನಾನಾ ಹಗರಣಗಳು, ಅವೈಜ್ಞಾನಿಕ ರೀತಿಯ ಘೋಷಣೆಗಳಿಂದಾಗಿ ರಾಜ್ಯವನ್ನು ಆರ್ಥಿಕವಾಗಿ ಮಾತ್ರವಲ್ಲದೆ, ಬೌದ್ಧಿಕವಾಗಿಯೂ ದಿವಾಳಿತನದತ್ತ ಕೊಂಡೊಯ್ಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...