ಬಿಸಿ ಊಟ ತಯಾರಿಕಾ ಮಹಿಳೆಯರಿಗೆ ಕೈಗೆ ಬಳೆ ತೊಡದಿರುವಂತೆ ಮಾರ್ಗಸೂಚಿ ಹೊರಡಿಸಿದ್ದು ರಾಜ್ಯ ಸರಕಾರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

61

“ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.


ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ

ಎಂದು ಹೇಳಲಾಗುತ್ತಿದೆ.  ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರು ಬಳೆ, ಬಿಂದಿಗೆ ಧರಿಸುತ್ತಾರೆ. ಆದರೆ ಇದೀಗ ಶಿಕ್ಷಣ ಇಲಾಖೆಯ ಆದೇಶದಿಂದ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಮಂತ್ರಿ ಸ್ಪಷ್ಟನೆ: ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ  ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...