ರಾಜ್ಯದಲ್ಲಿ ಅಕ್ಷರ ಹಾಗೂ ಅರೋಗ್ಯ ಎರಡಕ್ಕೂ ಬೆಲೆ ಇಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಎಂಎಲ್ ಸಿ ವಿಶ್ವನಾಥ್

1

“ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ.

ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ

. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ ವ್ಯವಸ್ಥೆ ಈಗಲೂ ಮುಂದುವರಿದಿದೆ. ವಿದ್ಯಾರ್ಥಿಗಳ ಶುಲ್ಕದಲ್ಲಿ ವಿಶ್ವವಿದ್ಯಾಲಯ ನಡೆಯುವಂತಾಗಿದೆ.

ರಾಜ್ಯದಲ್ಲೀಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಹೇಳಿದರು.

ಉದಯಗಿರಿ ಕಲ್ಲು ತೂರಾಟ ಪ್ರಕರಣ ಕುರಿತು ಮಾತನಾಡಿ, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು

. ಈ ಸರ್ಕಾರವನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಹರಿಹಾಯ್ದರು.

ರಾಜ್ಯದಲ್ಲಿ ಶಾಂತಿಗೆ ಅವಕಾಶ ಇಲ್ಲದಂತಾಗಿದೆ. ಎಲ್ಲಾ ಕಡೆ, ಪ್ರಕ್ಷುಬ್ಧತೆ, ಗಲಾಟೆ ಗಲಭೆ, ಕೊಲೆ, ಆತ್ಮಹತ್ಯೆಗಳ ನಡೆಯುತ್ತಿವೆ, ಇದಕ್ಕೆಲ್ಲ ಯಾರು ಕಾರಣ? ಜನ ಕಾರಣ ಅಲ್ಲ

. ನಾವು ಆಯ್ಕೆ ಮಾಡಿದ ಸರ್ಕಾರ ಕಾರಣ. ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು.

ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ.

ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ, ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿಲ್ಲ.

ನಮ್ಮ ಹೆಂಡ್ತಿಯರಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕುರಿತು ಮಾತನಾಡಿ, ಉತ್ತರಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚೆನ್ನಾಗಿದೆ.

ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆದಿದೆ. ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ. ಉತ್ತರಪ್ರದೇಶ ಸರ್ಕಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...